ಬೆಳಗಾವಿ ; ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಚಾಕು ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೆಳಗುoದಿ ಗ್ರಾಮದ ಬಸವಂತ ಗಣಪತಿ ಕಡೋಲ್ಕರ ಎಂಬವರೇ ಹಲ್ಲೆಗೊಳಗಾಗಿದ್ದು ಅವರು ರಾಜ್ಯದ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರಿನ ಚಾಲಕರಾಗಿದ್ದಾರೆಂದು ವರದಿಯಾಗಿದೆ.
ಚಾಕು ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿಗೆ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಸಚಿವರ ಪುತ್ರ ಮೃಣಾಲ್ ಹೆಬ್ಬಾಳಕರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಬೆಳಗಾವಿ ಕ್ಲಬ್ ರಸ್ತೆಯಲ್ಲಿ ನಡೆದ ಘಟನೆ ಕುರಿತು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಸಿಪಿ ಹಾಗೂ ಪೊಲೀಸ್ ಕಮಿಷನರ್ ಹಾಗೂ ಹಿರಿಯ ಪೋಲಿಸ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಚಾಕು ಹಲ್ಲೆ ಮಾಡಿದ ಆರೋಪಿತರಿಗೆ ಬಲೆ ಬೀಸಿದ್ದು ಶೋಧ ಕಾರ್ಯ ಮುಂದುವರೆದಿದೆ.