ಬೆಂಗಳೂರು:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶುಕ್ರವಾರ ಗೃಹಲಕ್ಷ್ಮಿ ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿ ಮೂರು ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು ಈ ಸಭೆಯಲ್ಲಿ ಯೋಜನೆಯ ಕುರಿತು ವಿಸ್ಕೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಬುಧವಾರ ಗೃಹಲಕ್ಷ್ಮಿ ಯೋಜನೆ ಜಾರಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಆಗಸ್ಟ್ 17 ಅಥವಾ 18ರಂದು ಯೋಜನೆ ಜಾರಿ ಮಾಡುತ್ತೇವೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಎದುರಾಗುತ್ತಿರುವ ಕಾರಣ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲ ಆಗುವಂತೆ ಸರಳವಾಗಿ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.