LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿ ಯೋಜನೆಗೆ ಏನೂ ತಾಂತ್ರಿಕ ಸಮಸ್ಯೆಯಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದ ಅವರು ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಅಂತಹ ಸಮಸ್ಯೆ ಏನೂ ಇಲ್ಲ ಎಂದರು.

ಈ‌ಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026