ಬೆಳಗಾವಿ: ತುಲಾಭಾರದ ವೇಳೆ ಆದ ಅವಘಡದ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮಿಗಳ ಆರೋಗ್ಯದ ಕುರಿತಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀಗಳ ಆರೋಗ್ಯ ವಿಚಾರಿಸಿದರು.
ಶ್ರೀಗಳ ಆಪ್ತ ಸಹಾಯಕರಿಗೆ ಕರೆ ಮಾಡಿ ಸ್ವಾಮೀಜಿಗಳ ಆರೋಗ್ಯ ಕುರಿತಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದರು. ಶ್ರೀಗಳಿಗೆ ಸಣ್ಣ ಗಾಯವಾಗಿದ್ದನ್ನು, ಗಾಭರಿಪಡುವಂತದ್ದು ಏನಿಲ್ಲ . ಈಗ ಆರೋಗ್ಯವಾಗಿದ್ದು, ನವದೆಹಲಿಯಿಂದ ಅಯೋಧ್ಯೆಯತ್ತ ಶ್ರೀಗಳು ಪ್ರಯಾಣಿಸುತ್ತಿದ್ದಾರೆ ಎಂದು ಆಪ್ತಸಹಾಯಕರು ತಿಳಿಸಿದರು ಎಂದು ಸಚಿವರು ತಿಳಿಸಿದ್ದಾರೆ.
ಶ್ರೀಗಳಿಗೆ ದೇವರು ಹೆಚ್ಚಿನ ಆಯುಷ್ಯ, ಆರೋಗ್ಯ ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.