E-PAPER
17 Nov 2026, 12:18:05 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು-೨೦:ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್ ಕೆಜಿ, ಯುಕೆಜಿ‌ ಆರಂಭಿಸುವ ಕುರಿತ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ- ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯವರು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಗುರುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಸಚಿವರು, ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ, ಕಾರ್ಮಿಕ ಸಂಘಟನೆಗಳ ಮುಖಂಡ ಮೀನಾಕ್ಷಿ ಸುಂದರಂ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.