LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಈ ಮನವಿಯ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ತುಮಕೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಬರಬೇಕಾದ ಅಗತ್ಯವಿದೆ ಎಂದರು.

ಬೆಂಗಳೂರಿಗೆ ತಾಗಿಕೊಂಡಿರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅಲ್ಲಿ ಒಂದು ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಕೂಡ ಹೇಳುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ನಗರದ ಮಧ್ಯಭಾಗದಲ್ಲಿದೆ. ಹೀಗಾಗಿ ಇಲ್ಲಿ ಪಾರ್ಕಿಂಗ್, ಸಂಚಾರ ದಟ್ಟಣೆ ಇತ್ಯಾದಿ ಸಮಸ್ಯೆಗಳಿವೆ. ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗಲಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವಿಜಯಪುರದಲ್ಲೂ ಇಂಥದ್ದೊಂದು ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ ಎಂದು ಪಾಟೀಲ ನುಡಿದಿದ್ದಾರೆ.

ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ₹15 ಲಕ್ಷದಂತೆ ನೀಡಲಾಗಿದೆ ಎಂದು ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ