Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಸಚಿವ ಎಂ.ಬಿ. ಪಾಟೀಲ ಹೆಜ್ಜೆ

 

ಸ್ಥಳೀಯ ಶಾಸಕರು, ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ‌ ನಡೆಸಿದ ನಂತರ ಖಾಸಗೀಕರಣದ ಬಗ್ಗೆ ತೀರ್ಮಾನ: ಎಂ.ಬಿ.ಪಾಟೀಲ

ಬೆಂಗಳೂರು:
ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ ಅವರು, ಕಾರ್ಖಾನೆ ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನಾಗಿರಬೇಕು ಎಂಬ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ‌ ನಡೆಸಲು‌ ಸಚಿವರು‌ ಸೂಚಿಸಿದರು. ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರನ್ನೂ ಕರೆಯಲು ಸಚಿವರು ಸೂಚಿಸಿದರು.

ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಮೈಸೂರು ಪೇಪರ್ ಮಿಲ್ಸ್ ಸದ್ಯಕ್ಕೆ 1,482 ಕೋಟಿ ರೂ. ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ 2010 ರಿಂದ ಈತನಕ 850 ಕೋಟಿ ರೂ. ಸಾಲದ ರೂಪದಲ್ಲಿ ಕೊಟ್ಟಿದೆ ಎಂದು ಅವರು ತಿಳಿಸಿದರು.

ಈ ಮಧ್ಯೆ ಎಂಪಿಎಂ ಖಾಸಗೀಕರಣಕ್ಕೆ ಯತ್ನ ನಡೆದಿತ್ತು. ಸಂಸ್ಥೆ ಮೇಲೆ ಇರುವ ಆರ್ಥಿಕ‌ ಹೊರೆಯನ್ನು ನಿಭಾಯಿಸಲು ಹಣಕಾಸು ಇಲಾಖೆಯ ಸಹಕಾರ ಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳ ಸಭೆ ನಂತರ ಖಾಸಗೀಕರಣದ ರೂಪುರೇಷೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಎಂಪಿಎಂ ವ್ಯಾಪ್ತಿಯಲ್ಲಿ ಸುಮಾರು 23 ಸಾವಿರ ಹೆಕ್ಟೇರ್ ಅರಣ್ಯ ಮತ್ತು ಅರಣ್ಯೇತರ ಭೂಮಿ ಇದ್ದು ಇಲ್ಲಿ ಸದ್ಯಕ್ಕೆ ಅಕೇಶಿಯಾ, ನೀಲಗಿರಿ ಮತ್ತು ಬಿದಿರನ್ನು ಬೆಳೆಯಲಾಗುತ್ತಿದೆ. ಒಂದು ವೇಳೆ ಕಾರ್ಖಾನೆಯನ್ನು ಗುತ್ತಿಗೆ ‌ನೀಡಿದರೂ, ಕಾರ್ಖಾನೆ ಜಾಗದಲ್ಲಿ‌, ನಿಷೇಧಿಸಿರುವ ನೀಲಿಗಿರಿ ಬೆಳೆಯಲು ಅವಕಾಶ‌ ನೀಡಬಹುದೇ ಎಂಬುದನ್ನೂ ಕೂಲಂಕಶವಾಗಿ ಪರಿಶೀಲಿಸಬೇಕು ಎಂದು ಅವರು ವಿವರಿಸಿದರು.

ಇದಲ್ಲದೆ ಎಂಪಿಎಂನ ಕೆಲವು ಉದ್ಯೋಗಿಗಳಿಗೆ ಸರ್ಕಾರದ ವಿವಿಧ ಸಂಸ್ಥೆ/ನಿಗಮಗಳಲ್ಲಿ ನೌಕರಿ ಕೊಡಿಸುವ ಕೆಲಸವೂ ಆಗುತ್ತಿದೆ. ಕೆಲವರಿಗೆ ಸ್ವಯಂ ನಿವೃತ್ತಿ ನೀಡಲಾಗಿದೆ. ಜತೆಗೆ ತಾತ್ಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ 250 ಫಾರೆಸ್ಟ್ ವಾಚರ್ ಗಳ ವೇತನ ಏರಿಕೆಗೂ ಒಂದು ಪರಿಹಾರ ರೂಪಿಸಬೇಕು ಎಂದು ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಸೆಲ್ವಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಎಂಪಿಎಂ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಎಪಿಸಿಸಿಎಫ್ ವನಶ್ರೀ ವಿಪಿನ್ ಸಿಂಗ್, ಚೀಫ್ ಆಪರೇಟಿಂಗ್ ಆಫೀಸರ್ ರವೀಂದ್ರನಾಥ್ ಮುಂತಾದವರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ