LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅವಕಾಶಗಳು ಲಭಿಸಿದರೆ ಯುವಜನತೆ ಉತ್ತಮ ಸಾಧನೆ ಮಾಡುತ್ತಾರೆ: ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ :ಯುವಜನತೆಗೆ ಅವಕಾಶಗಳನ್ನು ನೀಡಿದರೆ ಉತ್ತಮ ಸಾಧನೆ ಮಾಡುತ್ತಾರೆ. ಈ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು ಇದರ ಸದುಪಯೋಗವನ್ನು ಉದ್ಯೋಗಾಂಕ್ಷಿಗಳು ಪಡೆದುಕೊಳ್ಳಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(ಕೆಎಸ್‍ಡಿಸಿ), ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಸೈನ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕಷ್ಟುಪಟ್ಟು ಓದುತ್ತಾರೆ. ಆದರೆ ಓದು ಮುಗಿದ ಮೇಲೆ ಏನು ಕೆಲಸ ಮಾಡಬೇಕೆಂದು ತಿಳಿಯದೆ ತೊಂದರೆ ಅನುಭವಿಸುತ್ತಾರೆ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಗದೆ ಕಷ್ಟಪಡುತ್ತಾರೆ. ಆದ್ದರಿಂದ ಒಂದೇ ವೇದಿಕೆಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡುವ ಇಂತಹ ಬೃಹತ್ ಉದ್ಯೋಗ ಮೇಳಗಳು ಯುವಜನತೆ ಕೆಲಸ ಪಡೆಯಲು ಸಹಕಾರಿಯಾಗಿವೆ.

ಇಂದು 82 ಕಂಪೆನಿಗಳು ವಿವಿಧ ರೀತಿಯ ಹುದ್ದೆಗಳದನ್ನು ನೀಡಲು ಮುಂದೆ ಬಂದಿದ್ದು ಸುಮಾರು 12 ಸಾವಿರ ಉದ್ಯೋಗ ನೀಡುವ ಅವಕಾಶವಿದೆ. ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡು ಇದರ ಉಪಯೋಗ ಪಡೆಯಬೇಕು. ನಮ್ಮ ಭಾಗದ ಮಕ್ಕಳು ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರಿಗೆ ಉತ್ತಮ ಅವಕಾಶಗಳು ಇಂದು ಸಿಗಬೇಕು. ಸರ್ಕಾರ ಉದ್ಯೊಗ ಸೃಷ್ಟಿ ಮತ್ತು ಅವಕಾಶಗಳನ್ನು ನೀಡುವುದು ಎರಡಕ್ಕೂ ಮಹತ್ವ ನೀಡುತ್ತಿದ್ದು, ಕೈತುಂಬ ಕೆಲಸ ಪಡೆದು ಆರ್ಥಿಕವಾಗಿ ಸದೃಢರಾಗಬೇಕೆಂದು ಆಶಿಸಿದರು.

ಓದು ಮುಗಿಸಿ, ತಕ್ಷಣ ಕೆಲಸ ಸಿಗದೆ ಮನೆಯಲ್ಲಿರುವ ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ ಹೊರೆಯಾಗದಿರಲೆಂದು ಹಾಗೂ ತಮ್ಮ ಸಣ್ಣ ಪುಟ್ಟ ಖರ್ಚುಗಳು, ಉದ್ಯೋಗ ಹುಡುಕಲು ಅನುಕೂಲವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆಯನ್ನು ಬರುವ ಜನವರಿಯಿಂದ ಜಾರಿಗೆ ತರಲಾಗುವುದು. ಡಿಪ್ಲೊಮಾ ಮುಗಿಸಿದವರಿಗೆ ರೂ.1500 ಹಾಗೂ ಪದವಿ ಮುಗಿಸಿದವರಿಗೆ ರೂ.3000 ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದರು.

ಬೃಹತ್ ಉದ್ಯೋಗ ಮೇಳದಲ್ಲಿ ಬೆಳಗ್ಗೆಯಿಂದಲೇ ತೆರೆಯಲಾದ ವಿವಿಧ ಮಳಿಗೆಗಳಲ್ಲಿ ಉದ್ಯೋಗಾಕಾಂಕ್ಷಿಗಳು ಸರತಿ ಸಾಲಿನಲ್ಲಿ ನಿಂತು ನೋಂದಣಿ ಮಾಡಿಸಿಕೊಳ್ಳುತ್ತಿದ್ದರು. ಕಾಲೇಜಿನ ಕೊಠಡಿಗಳಲ್ಲಿ ಸಂದರ್ಶನ ನಡೆಸಿ ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ವಿತರಣೆ ಆಗುತ್ತದೆ.

ಶಾಸಕರಾದ ಚನ್ನಬಸಪ್ಪ, ಎಂಎಲ್ಸಿ ಡಿ‌ಎಸ್ ಅರುಣ್, ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶಕ ನಾಗೇಂದ್ರ ಎಫ್ ಹೊನ್ನಳ್ಳಿ ಇತರೆ ಅಧಿಕಾರಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ