ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆಯಲ್ಲಿ ಅಂಬೇಡ್ಕರ್ ಹಾಡಿಗೆ ಡೋಲು ಬಾರಿಸಿದ ಸಚಿವ ಸಂತೋಷ ಲಾಡ್
ಧಾರವಾಡ ) ಜ.26: ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಚಿವ ಸಂತೋಷ ಲಾಡ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ನಮಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್.ಆರ್.ಪಾಟೀಲ, ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮನಸೂರ ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು, ಡಾ. ಲೋಹಿತ ನಾಯ್ಕರ, ದೇವರಾಜ ಕಂಬಳಿ, ರಾಜೇಶ್ವರಿ ಸಾಲಗಟ್ಟಿ, ತವನಪ್ಪಾ ಅಷ್ಟಗಿ, ರಮೇಶ ನಲ್ವಡಿ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಮತ್ತು ಸಂಗೋಳ್ಳಿ ರಾಯಣ್ಣನ ಅಭಿಮಾನಿಗಳು ಭಾಗವಹಿಸಿದ್ದರು.
ಜಾನಪದ ಹಾಡಿಗೆ ಡೋಲು ನುಡಿಸಿದ ಸಚಿವರು: ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಕುರಿತ ಹಾಡಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಡೋಲು ಬಾರಿಸಿ ಗಮನ ಸೆಳೆದರು.
ಜನಪದ ಗಾಯಕರೊಬ್ಬರು ಅಂಬೇಡ್ಕರ್ ಕುರಿತು ಹಾಡು ಹೇಳುವಾಗ ಸಚಿವ ಸಂತೋಷ ಲಾಡ್ ಅವರು ಡೋಲು ಬಾರಿಸಿದರು. ಹಾಡಿನ ಲಯಕ್ಕೆ ಕ್ರಮಬದ್ಧವಾಗಿ ಲಾಡ್ ಅವರು ಡೋಲು ಬಾರಿಸಿದ್ದು ವಿಶೇಷವಾಗಿತ್ತು. ಸಚಿವರ ಡೋಲಿಗೆ ಸಭೀಕರಲ್ಲೆರೂ ಚಪ್ಪಾಳೆಯ ಮೂಲಕ ಪ್ರಶಂಸೆ ವ್ಯಕ್ತಪಡಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.