ಬೆಳಗಾವಿ:ಇಟ್ಟಿಚ್ಚಿಗೆ ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ನಡೆದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳು ಹೆಚ್ಚಾಗಿ ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆಯುತ್ತಿವೆ ಎಂಬ ಆರೋಪಗಳ ನಡುವೆ, ‘ನಮ್ಮವರ ಷಡ್ಯಂತ್ರವಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಸಿದರು. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಯಾವ ಅರ್ಥದಲ್ಲಿ ಆ ಹೇಳಿಕೆ ನೀಡಿದ್ದಾರೆ ಎಂಬುದು ತಮಗೆ ತಿಳಿದಿಲ್ಲ. ಅವರ ಹೇಳಿಕೆಗೆ ಅವರೇ ಉತ್ತರಿಸಬೇಕು. ನನ್ನನ್ನು ಕೇಳಿದರೆ ಈ ಕುರಿತು ನಾನೇನು ಹೇಳಲು ಸಾಧ್ಯ ಎಂದರು.
ಬೆಂಗಳೂರಿನ ಹೆಚ್ಚುತ್ತಿರುವ ಜನಸಂಖ್ಯೆ, ಸಂಚಾರ ದಟ್ಟಣೆ ಹಾಗೂ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಸಮರ್ಥಿಸಿದ ಸವದಿ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗೆ ಬೆಂಗಳೂರಿಗೆ ಬರುವ ಜನರು ನಗರದಲ್ಲಿಯೇ ನೆಲೆಸುತ್ತಿರುವುದರಿಂದ ಜನಸಂಖ್ಯೆ ಹೆಚ್ಚುತ್ತಿದೆ. ಪರಿಣಾಮವಾಗಿ ಟ್ರಾಫಿಕ್ ದಟ್ಟಣೆ ಮತ್ತು ಮಾಲಿನ್ಯವೂ ಹೆಚ್ಚುತ್ತಿದೆ ಎಂದರು.
ನಂದಿನಿ ಹಾಲಿನ ದರ ಏರಿಕೆ ಕುರಿತು ಈಗಾಗಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ನಾಲ್ಕೈದು ದಿನಗಳಲ್ಲಿ ಹೊಸ ದರ ನಿಗದಿಯಾಗುವ ಸಾಧ್ಯತೆಯಿದೆ. ಹಾಲು ಒಕ್ಕೂಟಗಳು ಪ್ರತಿ ಲೀಟರ್ಗೆ ₹8ರಿಂದ ₹10ರವರೆಗೆ ದರ ಹೆಚ್ಚಳಕ್ಕೆ ಮನವಿ ಮಾಡಿವೆ. ಗ್ರಾಹಕರು ಹಾಗೂ ಹಾಲು ಉತ್ಪಾದಕರ ಹಿತ ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕಬ್ಬಿನ ದರ ಹೆಚ್ಚಳದ ವಿಚಾರದಲ್ಲಿ ರೈತರು, ಗ್ರಾಹಕರು ಹಾಗೂ ಸಕ್ಕರೆ ಕಾರ್ಖಾನೆಗಳ ಹಿತ ಪರಿಗಣಿಸಬೇಕು. ಸಕ್ಕರೆಗೆ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಬೇಕು ಎಂದು ಸವದಿ ಹೇಳಿದರು.