LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ಹ್ಯಾಂಡ್‍ಲೂಮ್ಸ್‍ಗೆ ಬಜೆಟ್‍ನಲ್ಲಿ ಅನುದಾನ:  ಸಚಿವ ಶಿವಾನಂದ ಪಾಟೀಲ ಭರವಸೆ

ಬೆಂಗಳೂರು: ಕಾವೇರಿ ಹ್ಯಾಂಡ್‍ಲೂಮ್ಸ್‍ನ ಗತವೈಭವವನ್ನು ಮರಳಿ ತರಬೇಕಿದ್ದು, ಬಜೆಟ್‍ನಲ್ಲಿ ಅಗತ್ಯ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.

ಜನವರಿ 19ರ ವರೆಗೆ, ಜಾಲಹಳ್ಳಿ ಮುಖ್ಯ ರಸ್ತೆಯ ಎಚ್‍ಎಂಟಿ ಮೈದಾನದಲ್ಲಿ ಕೇಂದ್ರ ಸರ್ಕಾರದ ಜವಳಿ ಸಚಿವಾಲಯದ ನೆರವಿನೊಂದಿಗೆ ಕಾವೇರಿ ಹ್ಯಾಂಡ್‍ಲೂಮ್ಸ್ ಆಯೋಜಿಸಿದ್ದ 15 ದಿನಗಳ ಗಾಂಧಿ ಬುನ್ಕರ್ ಮೇಳ (ರಾಷ್ಟ್ರೀಯ ಕೈಮಗ್ಗ ಮೇಳ)ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾವೇರಿ ಹ್ಯಾಂಡ್‍ಲೂಮ್ಸ್ ಮಾರಾಟ ಮಳಿಗೆ ಆರಂಭಿಸಲು ಸಹಕಾರ ನೀಡಲಾಗುವುದು ಎಂದು ಹೇಳಿದರು.

ರೂ.16 ಕೋಟಿ ಸಾಲ ತೀರಿಸಲು ಸಾಧ್ಯವಾಗದ ಕಾರಣ, ಅಪೆಕ್ಸ್ ಬ್ಯಾಂಕ್ ಮುಟ್ಟುಗೋಲು ಹಾಕಿಕೊಂಡಿದ್ದ ಕಟ್ಟಡವನ್ನು ಇತ್ಯರ್ಥಪಡಿಸಿ ಉಳಿಸಿಕೊಡಲಾಗಿದೆ. ಈ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಸುಮಾರು ರೂ.50 ಕೋಟಿ ಆಸ್ತಿಯಾಗಲಿದೆ. ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಇರುವ ಕಾರಣ ಈ ಸಾಲದ ಮೊತ್ತವನ್ನು ಕಡಿಮೆ ಮಾಡಿಸಿ ಇತ್ಯರ್ಥಪಡಿಸಲು ಸಾಧ್ಯವಾಯಿತು ಎಂದು ಹೇಳಿದರು.

ರಾಷ್ಟ್ರೀಯ ಕೈಮಗ್ಗ ಮೇಳಕ್ಕೆ ಕೇಂದ್ರ ಸರ್ಕಾರ ಕೇವಲ 80 ಮಳಿಗೆಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಅನೇಕ ನೇಕಾರರು ಮಳಿಗೆ ಸಿಗದೆ ಮೇಳದಿಂದ ಹೊರಗೆ ಉಳಿಯುತ್ತಿರುವುದು ಗಮನಕ್ಕೆ ಬಂದಿದೆ. ಹೆಚ್ಚುವರಿ 20 ಮಳಿಗೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಹೇಳಿದರು.

ಕೈಮಗ್ಗ ನೇಕಾರರ ಹಿತದೃಷ್ಟಿಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಹೊಸ ಜವಳಿ ನೀತಿ ಜಾರಿಗೆ ಸಿದ್ಧತೆ ನಡೆದಿದ್ದು, ತಜ್ಞರೊಂದಿಗೆ ಸಮಾಲೋಚನೆ ನಡೆದಿದೆ. ಜವಳಿ ಉದ್ಯಮ ಪುನಶ್ಚೇತನಕ್ಕೆ ಪೂರಕವಾಗಿ ನೀತಿ ರೂಪಿಸಲಾಗುತ್ತಿದೆ. ನೆರೆ ರಾಜ್ಯಗಳಲ್ಲಿನ ಪೂರಕ ಅಂಶಗಳನ್ನೂ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದು ತಿಳಿಸಿದರು.

ವಿದ್ಯುತ್ ಮಗ್ಗ ನೇಕಾರಿಕೆ ಪ್ರೋತ್ಸಾಹಿಸಲು ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಂದರಿಂದ ಹತ್ತು ಅಶ್ವಶಕ್ತಿವರೆಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 10.1 ಅಶ್ವಶಕ್ತಿಯಿಂದ 20 ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್‍ಗೆ 1.25 ರೂ. ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 30,042 ಘಟಕಗಳು ರಿಯಾಯಿತಿ ದರದ ವಿದ್ಯುತ್ ಸೌಲಭ್ಯ ಪಡೆಯುತ್ತಿವೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯುತ್ ಮಗ್ಗ ಘಟಕಗಳಿಗೆ 20ರಿಂದ 200 ಎಚ್‍ಪಿ ವರೆಗಿನ ವಿದ್ಯುತ್ ಸಂಪರ್ಕ ಪಡೆದ ಘಟಕಗಳಿಗೆ ವಿದ್ಯುತ್ ಬಿಲ್ ಪಾವತಿ ಮಾಡಿದ ಒಟ್ಟು ಮೊತ್ತದಲ್ಲಿ ಪ್ರತಿಶತ 50ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಉದ್ದೇಶಕ್ಕೆ ನೂರು ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ನೇಕಾರರ ಸಹಕಾರ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಂದ ನೇಕಾರರಿಗೆ ಶೂನ್ಯ ಹಾಗೂ ಪ್ರತಿಶತ ಒಂದರ ಬಡ್ಡಿ ದರದಲ್ಲಿ ಎರಡು ಲಕ್ಷ ರೂ.ವರೆಗೆ ಹಾಗೂ ಪ್ರತಿಶತ ಮೂರರ ಬಡ್ಡಿ ದರದಲ್ಲಿ ಎರಡರಿಂದ ಐದು ಲಕ್ಷ ರೂ. ವರೆಗೆ ನೀಡುವ ಸಾಲಕ್ಕೆ ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಘಟಕಗಳ ಕೆಲಸಗಾರರಿಗೆ ಒಟ್ಟು 1.17 ಲಕ್ಷ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಹೊಸದಾಗಿ ಸಣ್ಣ ಮತ್ತು ಅತಿಸಣ್ಣ ಜವಳಿ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಉದ್ಯಮಶೀಲರಿಗೆ ಪ್ರೋತ್ಸಾಹ ನೀಡಲು ಪ್ರಸಕ್ತ ಸಾಲಿಗೆ ರೂ. 50 ಕೋಟಿ ಹಂಚಿಕೆ ಮಾಡಲಾಗಿದೆ. ಮೂರನೇ ತ್ರೈಮಾಸಿಕ ಅವಧಿಗೆ ಬಿಡುಗಡೆ ಮಾಡಲಾದ ರೂ.37.50 ಕೋಟಿ ಗಳನ್ನು 68 ಘಟಕಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.

ಕಾವೇರಿ ಹ್ಯಾಂಡ್‍ಲೂಮ್ಸ್ ಅಧ್ಯಕ್ಷ ಬಿ.ಜೆ.ಗಣೇಶ ಮಾತನಾಡಿ, ಬೆಳಗಾವಿ ಸೇರಿದಂತೆ ಹಲವೆಡೆ ಮಾರಾಟ ಮಳಿಗೆ ಆರಂಭಿಸಲು ಸಹಕಾರ ನೀಡಬೇಕು. ಬೆಂಗಳೂರಿನಲ್ಲಿ ಕನಿಷ್ಟ ಮೂರು ಮಳಿಗೆಗಳನ್ನು ಆರಂಭಿಸುವ ಅಗತ್ಯವಿದ್ದು, ತಮ್ಮ ಸಹಕಾರ ಅಗತ್ಯ ಎಂದು ಜವಳಿ ಸಚಿವರಿಗೆ ಮನವಿ ಮಾಡಿದರು.

ಕಾವೇರಿ ಹ್ಯಾಂಡ್‍ಲೂಮ್ಸ್ ನ ಆಸ್ತಿ ಉಳಿಸುವುದರ ಜೊತೆಗೆ ಹೊಸ ಕಟ್ಟಡ ನಿರ್ಮಿಸಲು ಜವಳಿ ಸಚಿವ ಶಿವಾನಂದ ಪಾಟೀಲ ಅವರು ನೀಡಿರುವ ಸಹಕಾರವನ್ನು ಮರೆಯುವುದಿಲ್ಲ. ಅವರ ಅವಧಿಯಲ್ಲಿ ಕಾವೇರಿ ಹ್ಯಾಂಡ್‍ಲೂಮ್ಸ್ ಮತ್ತೆ ತನ್ನ ಹಳೆಯ ದಿನಗಳಿಗೆ ಮರಳುವ ವಿಶ್ವಾಸ ಇದೆ ಎಂದರು.

ಎಂ ಡಿ ಲಕ್ಷ್ಮಿ ನಾರಾಯಣ, ಮಾತನಾಡಿ, ವೃತ್ತಿ ಪರವಾಗಿ ನೇಕಾರರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಮೂಲೆಗುಂಪಾಗಿದ್ದೆದ್ದಾರೆ. ರೈತರ ರೀತಿಯಲ್ಲಿಯೇ ನೇಕಾರರು ಕೆಲಸವೂ ಸಹಾ ಬಹಳ ಮುಖ್ಯ, ಎಲ್ಲಾ ಸರ್ಕಾರಗಳು ಸಹಾ ಸೌಲಭ್ಯಗಳನ್ನು ನೀಡುತ್ತಾ ಬಂದಿವೆ, ಅದೇ ರೀತಿಯಲ್ಲಿ ಮುಂದುವರೆದುಕೊಂಡು ಬರುತ್ತಿವೆ. 2023-24ರ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ನೇಕಾರರಿಗೆ ಕಡೆಗಣಿಸಬೇಕು, ಅವರಿಗೆ ಸವಲತ್ತು ಕೊಡಬೇಕು ಆಗಿದ್ದಾಗ ಮಾತ್ರ ನೇಕಾರರು ಮುಂದೆ ಬರ್ಕೂ ಸಾಧ್ಯ ಎಂದರು. ಸರ್ಕಾರ ಅವರ ಸಮಸ್ಯೆಗಳಿಗೆ ನಾಂದಿ ಹಾಡಬೇಕು, ಅದೆಷ್ಟೋ ನೇಕಾರರು ಸಾವನ್ನಪ್ಪಿದ್ದಾರೆ ಅಂತಹ ಕುಟುಂಬಕ್ಕೆ ಸರ್ಕಾರ ಸಹಾಯ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ, ಕಾವೇರಿ ಹ್ಯಾಂಡ್ ಲೂಮ್ಸ್ ಉಪಾಧ್ಯಕ್ಷ ನಾರಾಯಣ, ಶಿವಾನಂದ ಟರ್ಕಿ, ಜವಳಿ ಇಲಾಖೆ ಆಯುಕ್ತೆ ಕೆ. ಜ್ಯೋತಿ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟುKSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛ