Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಿ ನಾಗೇಂದ್ರ ಅವರಿಗೆ ಸಚಿವ ಸ್ಥಾನ ; ಮಾಜಿ ಸಚಿವ ಬಿ  ಶ್ರೀರಾಮುಲು ಅಸಮಾಧಾನ 

ಬಳ್ಳಾರಿ, ಆ.10:: ಕಾಂಗ್ರೆಸ್‌ ಪಕ್ಷವು ಇಂದಿರಾ ಗಾಂಧಿ ಅವರ ಕಾಲದಲ್ಲಿ ವಿಮಾನದ ವೇಗದಲ್ಲಿ ಬೆಳೆಯುತ್ತಿತ್ತು. ಆದರೆ ಇಂದು ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದಿಂದಾಗಿ ಅದರ ವೇಗ ಎತ್ತಿನಗಾಡಿಯಂತಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ರಾಜ್ಯದಲ್ಲಿನ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಟೀಕಿಸಿದರು.
ನಗರದ ತಮ್ಮ ಗೃಹ ಕಚೇರಿಯಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು , ಕಾಂಗ್ರೆಸ್‌ ಪಕ್ಷದವರು ಮೂರು ತಲೆಮಾರುಗಳಿಗೆ ಆಗುವಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದ ಶ್ರೀರಾಮುಲು, 1948ರಲ್ಲಿ ಜವಾಹರಲಾಲ್ ನೆಹರು ಅವರ ಕಾಲದಲ್ಲಿ ನಡೆದ ಜೀಪ್ ಹಗರಣ ದೇಶದಲ್ಲಿ ನಡೆದ ಪ್ರಮುಖ ಹಗರಣಗಳಲ್ಲಿ ಒಂದಾಗಿದೆ ಎಂದು ಹೇಳಿದರು.
 ನೆಹರು ಮತ್ತು ಇಂದಿರಾ ಗಾಂಧಿ ಅವರ ಕಾಲದ ವಿಚಾರಗಳನ್ನು ಪ್ರಸ್ತಾಪಿಸಲು ಕಾರಣವಿದೆ. ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸಿ ಜೈಲಿಗೆ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದರು.
ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಅವರು, ಈ ಪ್ರಕರಣದಲ್ಲಿ ಚಂದ್ರಶೇಖರ್ ಅವರ ಸಾವಿಗೂ ನಾಗೇಂದ್ರ ಅವರೇ ಕಾರಣ ಎಂಬ ಆರೋಪಿಸಿ ಈ ಘಟನೆಯಿಂದ ಚಂದ್ರಶೇಖರ್ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ಎಂದರು.
 ಬೀದಿ ಬದಿ ವ್ಯಾಪಾರಿಗಳ ಬದುಕಿಗೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿದ ಅವರು, "ಬೀದಿ ಬದಿ ವ್ಯಾಪಾರಿಗಳ ಜೀವನವನ್ನು ಬೀದಿಗೆ ತಂದಿರುವುದು ಸರಿಯೇ?" ಎಂದು ನಾಗೇಂದ್ರ ಅವರನ್ನು ಪ್ರಶ್ನಿಸಿದರು.
ನಾಗೇಂದ್ರ ಅವರ ವಿರುದ್ಧದ ಪ್ರಕರಣಗಳ ಹಿನ್ನೆಲೆಯಲ್ಲಿ ನ್ಯಾಯಾಲಯವು ದೇಶ ಬಿಟ್ಟು ಹೋಗದಂತೆ ಆದೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀರಾಮುಲು, ಮುಂದಿನ ದಿನಗಳಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಬಂದರೆ ಬಳ್ಳಾರಿ ಜನರ ಪರಿಸ್ಥಿತಿ ಏನಾಗಲಿದೆ ಎಂದು ಪ್ರಶ್ನಿಸಿದರು.
"ನಾಗೇಂದ್ರ ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಸ್ವಯಂಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಅವರು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಬೇಕು. ಅವರು ರಾಜೀನಾಮೆ ನೀಡುವವರೆಗೆ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯದಂತೆ ಹೋರಾಟ ನಡೆಸುವಂತೆ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇನೆ ಎಂದರು.
ಇದೇ ವೇಳೆ, ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ  ವಾರಕ್ಕೊಮ್ಮೆ ಸಚಿವರನ್ನು ಬದಲಾಯಿಸುವಂತಹ ಪರಿಸ್ಥಿತಿ ನಿರ್ಮಾಣವಾದರೆ ಮಾತ್ರ ಕಾಂಗ್ರೆಸ್‌ನಲ್ಲಿನ ಬಂಡಾಯಕ್ಕೆ ಪರಿಹಾರ ಸಿಗಬಹುದು. ಸರ್ಕಾರದೊಳಗಿನ ಈ ಗೊಂದಲವನ್ನು ನೋಡುತ್ತಿದ್ದರೆ ಮುಖ್ಯಮಂತ್ರಿ ಕುರ್ಚಿಯೂ ಅಲುಗಾಡುವ ಸಾಧ್ಯತೆ ಕಾಣುತ್ತಿದೆ ಎಂದು ಶ್ರೀರಾಮುಲು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಸಣ್ಣ  ಫಕೀರಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೊತ್ಕಾರ್, ಹನುಮಂತಪ್ಪ, ಗುಡಿಗಂಟಿ ಹನುಮಂತ, ಕೆ.ಎಸ್. ಅಶೋಕ್, ಮುಖಂಡರಾದ ಓಬಳೇಶ್, ತಿಮ್ಮಪ್ಪ, ವೇಮಣ್ಣ, ಭೀಮಲಿಂಗ, ಸುಗುಣ ಸೇರಿದಂತೆ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ