LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

"MISS INDIA" ಪಟ್ಟಿಯಲ್ಲಿ ದಲಿತರಿಲ್ಲ ಎಂದ ರಾಹುಲ್ ಗಾಂಧಿ ವಿರುದ್ಧ ರಿಜಿಜು 'ಬಾಲ ಬುದ್ಧಿ' ಚಾಟಿ

ನವದೆಹಲಿ: ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಪಟ್ಟಿಯಲ್ಲಿ ದಲಿತರು ಮತ್ತು ಆದಿವಾಸಿ ಮಹಿಳೆಯರೇ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂತಹ ಹೇಳಿಕೆಗಳು 'ಬಾಲಬುದ್ಧಿ'ಯ ಜನರಿಂದ ಮಾತ್ರ ಬರಲು ಸಾಧ್ಯ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಛೇಡಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜಾತಿ ಗಣತಿಗೆ ಒತ್ತಾಯಿಸಲು ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ್ದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಶೇ 90ರಷ್ಟು ಜನಸಂಖ್ಯೆಯ ಪಾಲ್ಗೊಳ್ಳುವಿಕೆ ಇಲ್ಲದಿದ್ದರೆ ಭಾರತ ನಿಷ್ಕ್ರಿಯಗೊಳ್ಳುತ್ತದೆ ಎಂದು ಹೇಳಿದ್ದರು. "ನಾನು ಮಿಸ್ ಇಂಡಿಯಾ ಪಟ್ಟಿಯನ್ನು ನೋಡಿದ್ದೆ. ಅದರಲ್ಲಿ ಯಾವುದೇ ದಲಿತ, ಆದಿವಾಸಿ ಅಥವಾ ಒಬಿಸಿ ವರ್ಗದ ಮಹಿಳೆಯರಿಲ್ಲ. ಕೆಲವರು ಕ್ರಿಕೆಟ್ ಅಥವಾ ಬಾಲಿವುಡ್ ಕುರಿತು ಮಾತನಾಡುತ್ತಾರೆ. ಯಾರೂ ಕೂಡ ಚಮ್ಮಾರ ಅಥವಾ ಪ್ಲಂಬರ್‌ನನ್ನು ಯಾರೂ ತೋರಿಸುವುದಿಲ್ಲ. ಅಷ್ಟೇ ಅಲ್ಲ, ಮಾಧ್ಯಮಗಳಲ್ಲಿನ ಪ್ರಮುಖ ನಿರೂಪಕರು ಕೂಡ ಶೇ 90ರಷ್ಟು ಮಂದಿಯಿಂದ ಬಂದವರಲ್ಲ" ಎಂದು ರಾಹುಲ್ ಗಾಂಧಿ ತಿಳಿಸಿದ್ದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST