ಕುಣಿಗಲ್ : ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಗಳ್ಳಲ್ಲೂ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಆರೋಗ್ಯವಂತ ಸದೃಢರಾಗಬೇಕೆಂದು ಶಾಸಕ ಡಾ. ಹೆಚ್ .ಡಿ. ರಂಗನಾಥ್ ತಿಳಿಸಿದರು.
ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಶಾಲಾ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶಯದಲ್ಲಿ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟ2026-27 ಉದ್ಘಾಟಿಸಿ ಮಾತನಾಡಿದರು.
ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ 14 /17ರ ವಯೋಮಿತಿ ಉಳ್ಳ ಬಾಲಕ ಬಾಲಕಿಯರು ಭಾಗವಹಿಸುತ್ತಿದ್ದು ಕ್ರೀಡೆಯಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಮನುಷ್ಯ ಆರೋಗ್ಯವಂತನಾಗಿ ಹೆಚ್ಚಿನ ಚಟುವಟಿಕೆಯಿಂದ ಸದಾ ಇರಬೇಕಾದರೆ ಕ್ರೀಡೆ ಸಹಕಾರಿಯಾಗುತ್ತದೆ ಪಾಠ ಪ್ರವಚನದ ಜೊತೆಗೆ ಕ್ರೀಡೆಯಲ್ಲಿ ತೊಡಗುವುದರೊಂದಿಗೆ ದೇಹ ಮತ್ತು ಜ್ಞಾನ ಬೆಳವಣಿಗೆ ಆಗುವುದರೊಂದಿಗೆ ಜೀವನಪೂರ್ತಿ ಉತ್ತಮ ಬದುಕು ರೂಪಿಸಿಕೊಳ್ಳಬಹುದೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಕ್ರೀಡಾಕೂಟವು ಈಗಾಗಲೇ ಆರು ಹೋಬಳಿಗಳಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ವತಿಯಿಂದ ಈ ಬಾರಿಯ ಕ್ರೀಡಾಕೂಟದಲ್ಲಿ 600 ವಿದ್ಯಾರ್ಥಿಗಳು ವಿವಿಧ ಕ್ರೀಡೆಲ್ಲಿ ಭಾಗವಹಿಸುತ್ತಿದ್ದಾರೆ ಎಂದರು
ದೈಹಿಕ ಶಿಕ್ಷಣಾಧಿಕಾರಿ ಮಂಗಳ ಗೌರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು,ಬಿ .ಆರ್ .ಸಿ. ಶ್ರೀನಿವಾಸಮೂರ್ತಿ, ಪ್ರಾಥಮಿಕs ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ಶ್ರೀನಿವಾಸ್,ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿರೇಂದ್ರಕುಮಾರ್, ಗಂಗಾಧರ್, ಶಿಕ್ಷಕರಾದ ಗೋವಿಂದರಾಜ್, ನಟರಾಜ್ , ನಂದಿನಿ.ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲಕೃಷ್ಣ. ಸೇರಿದಂತೆ ಇತರರು ಇದ್ದರು.