Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಭಾಗ್ಯನಗರ ಪಟ್ಟಣದ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಸುದ್ದಿಮೂಲ ವಾರ್ತೆ

ಕೊಪ್ಪಳ,ಮೇ 30: ಚುನಾವಣೆಯಲ್ಲಿ ಕ್ಷೇತ್ರದ ಜನತೆಗೆ ನೀಡಿದ ಆಶ್ವಾಸನೆಯನ್ನು ಪ್ರಮಾಣಿಕವಾಗಿ ಈಡೇರಿಸುವ ಮೂಲಕ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುವೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.

ನಗರದ ಸಮೀಪದ ಭಾಗ್ಯನಗರದ ಗಂಗಮ್ಮ ಲಕ್ಷ್ಮಣಸಾ ಖೋಡೆ

ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡ ಶಾಸಕರಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೊಪ್ಪಳ ನಗರದಲ್ಲಿ 168 ಕೋಟಿ ರೂ. ವೆಚ್ಚದಲ್ಲಿ 450 ಬೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಪ್ರಗತಿ ಹಂತದಲ್ಲಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಅಗತ್ಯವಿರುವ ಪೀಠೋಪಕರಣಗಳು, ವೈದ್ಯರು, ಸಿಬ್ಬಂದಿ ಹಾಗೂ ಸೌಲಭ್ಯ ನೀಡಲು ಸರಕಾರ ಮಟ್ಟದಲ್ಲಿ ತೀರ್ಮಾನಿಸಿ ಶೀಘ್ರವೇ ಪ್ರಾರಂಭಿಸಲಾಗುವುದು. ಅಲ್ಲದೇ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಲ್ಟಿ ಆಸ್ಪತ್ರೆಯನ್ನು 1000 ಹಾಸಿಗೆಗೆ ಹೆಚ್ಚಿಸಲಾಗುವುದು ಎಂದರು‌.

ಕ್ಷೇತ್ರದಲ್ಲಿ ಸಿಂಗಟಾಲೂರು, ಅಳವಂಡಿ-ಬೆಟಗೇರಿ, ಬಹದ್ದೂರಬಂಡಿ ಸೇರಿದಂತೆ ಅಪೂರ್ಣಗೊಂಡಿರುವ ಏತ ನೀರಾವರಿ ಯೀಜನೆಗಳನ್ನು ಜಾರಿಗೊಳಿಸಿ, ರೈತರಿಗೆ ವರವಾಗುವ ನಿಟ್ಟಿನಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನೀರಾವರಿ ಯೋಜನೆಗೆ ನಯಾಪೈಸೆ ಅನುದಾನ ನೀಡದೇ ತಾರತಮ್ಯ ಮಾಡಿದರು. ಇದರಿಂದ ನೀರಾವರಿ ಯೋಜನೆಗಳು ಕುಂಠಿತಗೊಂಡಿತು. ಹೀಗಾಗಿ ಈ ಬಾರಿಯ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕ್ಷೇತ್ರದ ಎಲ್ಲ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ರೈತರ ಜಮೀನಿಗೆ ನೀರು ಹರಿಸುತ್ತೇನೆ ಎಂದರು.

ಭಾಗ್ಯನಗರ ಪಟ್ಟಣಕ್ಕೆ ಸಂಪರ್ಕವಾಗಿ ಮೇಲ್ಸೆತುವೆಯಾಗಿದೆ. ಬರುವ ದಿನಗಳಲ್ಲಿ ಸಿಸಿರಸ್ತೆ, ಚರಂಡಿ ನಿರ್ಮಾಣ ಮಾಡಲಾಗುವುದು. ಫಾರ್ಮ್ ನಂ-6 ಸಂಬಂಧಿಸಿದಂತೆ ತ್ವರಿತಗತಿಯಲ್ಲಿ ಪ್ರತಿಯೊಬ್ಬರಿಗೂ ಕೊಡಿಸುವ ಕೆಲಸ ನಿಶ್ಚಿತವಾಗಿ ಮಾಡುತ್ತೇವೆ. ನಗರಕ್ಕೆ ವಿಮಾನ ನಿಲ್ದಾಣಕ್ಕಾಗಿ, ನ್ಯಾಯಾಲಯ ಸಂಕೀರ್ಣಕ್ಕಾಗಿ ಬಿಜೆಪಿ ಸರಕಾರ ಜಾಗ ಕೊಡಿಸುವ ಕೆಲಸ ಮಾಡಲಿಲ್ಲ. ಈಗ ನಮ್ಮ ಸರಕಾರ ರಚನೆಯಾಗಿದ್ದು, ನಗರಾಭಿವೃದ್ಧಿಗಾಗಿ ಡಿಪಿಆರ್ ಮಾಡಿಸಿ 168 ಕೋಟಿ ರೂ. ವೆಚ್ಚದಲ್ಲಿ ಭಾಗ್ಯನಗರ ಹಾಗೂ ಕೊಪ್ಪಳ ನಗರಕ್ಕೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಯುವಕರ ಬೇಡಿಕೆಯಂತೆ ಇ-ಲೈಬ್ರರಿ, ಇಂಟರ್ ನ್ಯಾಷನಲ್ ಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಂಡು, ಹೆಚ್ಚು ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದೆಂದರು.

ಈ ಸಂಧರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್ ಬಿ ನಾಗರಳ್ಳಿ, ಮಾಜಿ ನಾಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜುಲ್ಲು ಖಾದ್ರಿ, ಹಿರಿಯ ವಕೀಲರು ಆಸೀಫ್ ಅಲಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೂಳಪ್ಪ ಹಲಿಗೇರಿ,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ರಡ್ಡಿ, ಮುಖಂಡರಾದ ಶ್ರೀನಿವಾಸ್ ಗುಪ್ತಾ,ರಾಘವೇಂದ್ರ ಫಾನಘಂಟಿ,ಯಮನೂರಪ್ಪ ಕಬ್ಬೆರ್, ಸರಸ್ವತಿ ಇಟ್ಟಂಗಿ, ಧಾನಪ್ಪ ಕಾವಲುರ್, ತುಕಾರಾಮಪ್ಪ,ಎನ್. ಮೇಘರಾಜ, ಹೊನ್ನೂರಸಾಬ್, ಚನ್ನಪ್ಪ ತಟ್ಟಿ, ರಮೇಶ್ ಹ್ಯಾಟಿ, ಇಬ್ರಾಹಿಂ, ಜ್ಯೋತಿ ಗೊಂಡಬಾಳ, ಸವಿತ ಗೊರಂಟ್ಲಿ ಅಕ್ಬರ್ ಪಲ್ಟಾನ್ ವಕ್ತಾರ ಕುರುಗೋಡು ರವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ