LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಮಾಡಲ್ಲ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

 

ಚಿತ್ರದುರ್ಗ: ಗ್ರಾಮಗಳ ಅಭಿವೃದ್ಧಿ ವಿಚಾರಗಳಲ್ಲಿ ರಾಜಕಾರಣವನ್ನು ಮಾಡದೆ ಅಭಿವೃದ್ಧಿಯ ಕಡೆಗೆ ಆಲೋಚಿಸುವೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ತಾಲೂಕಿನ ಜಾನುಕೊಂಡ ಗ್ರಾಮದಲ್ಲಿ ಬುಧವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಮತ್ತು ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ, ಎಂ.ಜಿ.ಎನ್.ಆರ್. ಇ.ಜಿ.ಎ ಯೋಜನೆ, 15ನೇ ಹಣಕಾಸು ಯೋಚನೆ ಹಾಗೂ ಗ್ರಾಮ ಪಂಚಾಯಿತಿ ಇತರೆ ಯೋಜನೆಗಳ ಅನುದಾನದ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ರಾಜಕಾರಣದಿಂದ ಹೆಸರು ಉಳಿಯುವುದಿಲ್ಲ, ಅಭಿವೃದ್ಧಿಯ ಕೊಡುಗೆ ನೀಡಿದಾಗ ಮಾತ್ರ ಹೆಸರು ಚಿರಾಯು ಆಗುವುದು ಹಾಗಾಗಿ ಗ್ರಾಮ ಪಂಚಾಯಿತಿ ಸದಸ್ಯರು ಒಮ್ಮತದಿಂದ ರಾಜಕಾರಣ ಮಾಡದೆ ಅಭಿವೃದ್ಧಿಯ ಕಡೆಗೆ ಕೈಜೋಡಿಸಬೇಕೆಂದು ತಿಳಿಸಿದರು.

ಜಾನುಕೊಂಡ ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ 29.45ಲಕ್ಷ ಹಣವನ್ನ ಮೀಸಲಿಡಲಾಗಿದೆ, ಕಟ್ಟಡದ ಸೌಂದರ್ಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಸಹ ನೀಡಲಾಗುವುದು ಎಂದು ತಿಳಿಸಿದರು.

ಜಾನಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಗಿವೆ, ಸಿಸಿ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಐಮಸ್ಲೈಟ್, ಮುಜರಾಯಿ ಇಲಾಖೆಯ ದೇವಸ್ಥಾನಗಳ ಕಟ್ಟಡ, ಡಾಂಬರೀಕರಣ ಇತರೆ ವಿಶೇಷ ಯೋಜನೆಗಳ ಕಾಮಗಾರಿ ಗಳನ್ನ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.

ನಿರಂತರವಾಗಿ ನೀಡಬೇಕಿದಂತಹ ಕರೆಂಟೆನಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ ಎಂದು ರೈತರು ಮನವಿ ಮಾಡಿದರು ಮನವಿಗೆ ಸ್ಪಂದಿಸಿ ಸ್ಥಳದಲ್ಲೇ ಅಧಿಕಾರಗಳನ್ನು ಕರೆಸಿ ರೈತಾಪಿ ವರ್ಗದವರಿಗೆ ಕರೆಂಟಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಿ ಕೊಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ತಹಸಿಲ್ದಾರ್ ಗೋವಿಂದರಾಜು ಮಾತನಾಡಿ ಜಾನುಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಟಗರು ಹಟ್ಟಿ, ಕರಿಯಮ್ನಟ್ಟಿ, ಗಂಜಿಗಟ್ಟೆ, ಗ್ರಾಮಗಳನ್ನ ಈಗಾಗಲೇ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದ್ದು, ಸುಮಾರು 300 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವುದಕ್ಕೆ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗಿದೆ, ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಪ್ಲಾನಿಂಗ್ ಕೂಡ ನಡೆಸಲಾಗಿದೆ ಎಂದು ತಿಳಿಸಿದರು.

ಜಾನುಕೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಸ್ವಾಮಿ ಮಾತನಾಡಿ   ಜಾನುಕೊಂಡ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಒಗ್ಗೂಡಿಕೆಯಿಂದ ಸುಮಾರು 24.45 ಲಕ್ಷದ ವೆಚ್ಚದಲ್ಲಿ ನಿರ್ಮಾಣ ಮಾಡುವುದಕ್ಕೆ ಶಾಸಕರು ಗುದಲಿ ಪೂಜೆಯನ್ನು ನೆರವೇರಿಸಿದ್ದಾರೆ, ಈ ಒಂದು ಕಾರ್ಯ ಬಹುದಿನಗಳ ಕನಸಾಗಿತ್ತು ಆದರೆ ಇಂದು ನನಸಾಗಿದೆ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ವೈ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಯರ್ರಿಸ್ವಾಮಿ, ರೂಪಕುಮಾರಿ, ಕೆಡಿಪಿ ಸದಸ್ಯರಾದ ನಾಗರಾಜ್, ಸಂತೋಷ್, ಜಾನಪದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ನಾಗೇಶ್, ಜಾನುಕೊಂಡ ಗ್ರಾಮ ಪಂಚಾಯಿತಿ ಸದಸ್ಯರುಗಳಾದ, ಪ್ರಾಣೇಶ್, ಚಿಂತಾಮಣಿ, ಅಂಜಿನಿ, ಚಂದ್ರಪ್ಪ, ರಾಮಲಿಂಗಪ್ಪ, ಶೋಭಾ ಸಿದ್ದಪ್ಪ, ಚಂದ್ರು, ಪವಿತ್ರ, ವೆಂಕಟಚಲ, ನಿಜಲಿಂಗಪ್ಪ, ರಾಜಪ್ಪ, ಚಳಕೆರಮ್ಮ ಈಶ್ವರಪ್ಪ, ಗೌರಬಾಯಿ ಜಯ ನಾಯ್ಕ್, ಹಾಗೂ ಗ್ರಾಮಸ್ಥರಾದ ಸ್ವಾಮಿ, ಚಂದ್ರಪ್ಪ, ಮಂಜು, ಮೈಲಾರಪ್ಪ, ರಾಜು, ಸುಧಾಕರ್, ಸಿದ್ದಪ್ಪ, ಕರಿಯಪ್ಪ, ರಂಗಪ್ಪ, ಹನುಮಂತಪ್ಪ ಇತರರು ಇದ್ದರು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026