Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪ್ರಯತ್ನ: ಬೆಳಗುಂದಿ ಆಸ್ಪತ್ರೆಗೆ ಈಗ ಸೋಲಾರ್ ಬಲ

ಬೆಳಗಾವಿ :
ಜನರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಬೇಕಾದ ಹೆಚ್ಚಿನ ಸರಕಾರಿ ಆಸ್ಪತ್ರೆಗಳೇ ಅನಾರೋಗ್ಯದಿಂದ ಬಳಲುತ್ತಿರುತ್ತವೆ. ಅಲ್ಲಿ ಹೆಚ್ಚಿನ ಸಮಯ ವೈದ್ಯರೇ ಸಿಗುವುದಿಲ್ಲ, ವೈದ್ಯರಿದ್ದರೆ ಔಷಧ ಇರುವುದಿಲ್ಲ, ಎಲ್ಲವೂ ಇದ್ದರೆ ವೈದ್ಯಕೀಯ ಉಪಕರಣ ಬಳಸಲು ವಿದ್ಯುತ್ ಇರುವುದಿಲ್ಲ. ರಾತ್ರಿಯಂತೂ ವಿದ್ಯುತ್ ಕೈಕೊಟ್ಟರೆ ಕತೆ ಮುಗಿಯಿತು. ಹಾಗಾಗಿ ಹಳ್ಳಿಗಳಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಿನ ಸಮಯ ನಿರಾಶರಾಗಿ ಮರಳುವುದು ಅನಿವಾರ್ಯ.

ಇಂತಹ ಸಂದರ್ಭದಲ್ಲಿ ಬೆಳಗಾವಿ ತಾಲೂಕಿನ ಬೆಳಗುಂದಿ ಸರಕಾರಿ ಆಸ್ಪತ್ರೆಗೆ ಇದೀಗ ಸೋಲಾರ್ ವಿದ್ಯುತ್ ಬಲ ನೀಡಲಾಗಿದೆ. ಸೆಲ್ಕೋ ಸೋಲಾರ್ ಸಿಸ್ಟಂ ಆಸ್ಪತ್ರೆಗೆ ಸೋಲಾರ್ ವಿದ್ಯುತ್ ಒದಗಿಸಿದ್ದು, ವಿದ್ಯುತ್ ಕೈ ಕೊಟ್ಟರೂ ಚಿಕಿತ್ಸೆಗೆ ಅಡ್ಡಿಯಾಗುವುದಿಲ್ಲ. ಯೋಜನೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ಬೆಳಗುಂದಿ ಆಸ್ಪತ್ರೆಗೆ ತಂದಿದ್ದಾರೆ. ಜೊತೆಗೆ ಅದಕ್ಕೆ ಅಗತ್ಯವಾದ ಪೂರಕ ವೆಚ್ಚವನ್ನೂ ಅವರು ಸ್ವತಃ ನೀಡಿದ್ದಾರೆ.

ಈಗಾಗಲೆ ಯೋಜನೆ ಪೂರ್ಣಗೊಂಡಿದ್ದು, ಒಂದು ತಿಂಗಳು ಪ್ರಾಯೋಗಿಕ ಬಳಕೆಯೂ ಯಶಸ್ವಿಯಾಗಿದೆ. ಈ ಯೋಜನೆಯಿಂದಾಗಿ ಬೆಳಗುಂದಿ ಮತ್ತು ಸುತ್ತಲಿನ 4 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅನುಕೂಲವಾಗಿದೆ. ಅವರು ಯಾವುದೇ ಸಂದರ್ಭದಲ್ಲಿ ಆಸ್ಪತ್ರೆಗೆ ಬಂದರೂ ವಿದ್ಯುತ್ ಸಮಸ್ಯೆ ಕಾಡುವುದಿಲ್ಲ. ರಾತ್ರಿ ವೇಳೆ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಹಾಯವಾಗಿದೆ.

--------------

``ಮುಂದಿನ ದಿನಗಳಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸೋಲಾರ್ ವ್ಯವಸ್ಥೆ ಅಳವಡಿಸಲು ಸೆಲ್ಕೋ ಸೋಲಾರ್ ಜೊತೆ ಮಾತುಕತೆ ನಡೆಸಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ''

-ಲಕ್ಷ್ಮೀ ಹೆಬ್ಬಾಳಕರ್, ಶಾಸಕರು

-----

``ಈ ಮೊದಲು ವಿದ್ಯುತ್ ಸಮಸ್ಯೆಯಿಂದಾಗಿ ಚಿಕಿತ್ಸೆ ನೀಡಲು ತೊಂದರೆಯಾಗುತ್ತಿತ್ತು. ಈಗ ಸೋಲಾರ್ ವ್ಯವಸ್ಥೆಯಿಂದಾಗಿ ಶಸ್ತ್ರ ಚಿಕಿತ್ಸೆಗಳಿಗೂ ಅನುಕೂಲವಾಗಿದೆ''

-ಡಾ.ರಾಮಕೃಷ್ಣ, ಬೆಳಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರ

--------

``ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ನಗರದತ್ತ ಮುಖ ನೋಡುವ ಸ್ಥಿತಿ ಇತ್ತು. ಹಾಗಾಗಿ ಸೆಲ್ಕೋ ಸಂಸ್ಥೆ ಸೌರ ವಿದ್ಯುತ್ ಮೂಲಕ ಆಸ್ಪತ್ರೆಗಳ ನೇರವಿಗೆ ಧಾವಿಸುತ್ತಿದೆ''

-ವಿನಾಯಕ ಹೆಗಡೆ, ಸೆಲ್ಕೋ ಸೋಲಾರ್ ಏರಿಯಾ ಮ್ಯಾನೇಜರ್

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ