Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಲಸಿ ಗ್ರಾಮದ ನೀರಿನ ಸಮಸ್ಯೆಗೆ ಸ್ಪಂದಿಸಿದ ಶಾಸಕರು

ಖಾನಾಪುರ : ಖಾನಾಪುರ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಕ್ಷೇತ್ರವಾಗಿರುವ ಹಲಸಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ದಿಸೆಯಲ್ಲಿ ಬುಧವಾರ ಮಹತ್ವದ ಹೆಜ್ಜೆ ಇಡಲಾಗಿದೆ.

ಶಾಸಕ ವಿಠ್ಠಲ ಹಲಗೇಕರ ಅವರ ಆದೇಶದ ಮೇರೆಗೆ ಗ್ರಾಮದಲ್ಲಿ ಹೊಸ ಬೋರ್ ವೆಲ್ ತೋಡುವ ಕಾಮಗಾರಿ ಯಶಸ್ವಿಯಾಗಿ ಆರಂಭಗೊಂಡಿದ್ದು, ಗಂಗಾ ತಾಯಿಯ ಕೃಪೆಯಿಂದ ನೀರು ಲಭ್ಯವಾಗಿರುವುದು ಗ್ರಾಮಸ್ಥರಲ್ಲಿ ಅಪಾರ ಸಂತಸ ಮೂಡಿಸಿದೆ. ಹಲವು ವರ್ಷಗಳಿಂದ ಎದುರಾಗುತ್ತಿದ್ದ ಕುಡಿಯುವ ನೀರಿನ ತೀವ್ರ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ದೊರಕುವ ವಿಶ್ವಾಸ ವ್ಯಕ್ತವಾಗಿದೆ.

ಹಲಸಿ ಗ್ರಾಮವು ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿದ ಪ್ರದೇಶವಾಗಿದ್ದು, ವರ್ಷಪೂರ್ತಿ ಭಕ್ತರು ಮತ್ತು ಪ್ರವಾಸಿಗರು ಭೇಟಿ ನೀಡುತ್ತಾರೆ. ವಿಶೇಷವಾಗಿ ಬೇಸಿಗೆ ಸಮಯದಲ್ಲಿ ಉಂಟಾಗುತ್ತಿದ್ದ ನೀರಿನ ಕೊರತೆ ಗ್ರಾಮಸ್ಥರಿಗೆ ಮಾತ್ರವಲ್ಲದೆ, ಆಗಮಿಸುವ ಭಕ್ತರಿಗೂ ತೊಂದರೆ ಉಂಟುಮಾಡುತ್ತಿತ್ತು. ಈ ಪರಿಸ್ಥಿತಿಯನ್ನು ಮನಗಂಡ ಶಾಸಕರು ತಕ್ಷಣ ಕ್ರಮ ಕೈಗೊಂಡು ಬೋರ್ ವೆಲ್ ವ್ಯವಸ್ಥೆ ಒದಗಿಸಿರುವುದು ಶ್ಲಾಘನೀಯವಾಗಿದೆ.

ಹಲಸಿ ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಒತ್ತು ನೀಡುತ್ತಿದ್ದು, ರಸ್ತೆ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳ ಸುಧಾರಣೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಮುಖ ಕಾಮಗಾರಿಗಳು ಇದೀಗ ಹಂತಹಂತವಾಗಿ ಕಾರ್ಯರೂಪಕ್ಕೆ ಬರುತ್ತಿರುವುದು ಗ್ರಾಮಸ್ಥರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.

ಗ್ರಾಮದ ಅಭಿವೃದ್ಧಿಗೆ ಈ ರೀತಿಯ ಬದ್ಧತೆ ಮುಂದುವರಿದರೆ, ಹಲಸಿ ಗ್ರಾಮವು ಮುಂದಿನ ದಿನಗಳಲ್ಲಿ ಮಾದರಿ ಗ್ರಾಮವಾಗಿ ಹೊರಹೊಮ್ಮುವುದು ಖಚಿತ ಎಂದು ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ