LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೊಬೈಲ್ ಟವರ್ ಕಳ್ಳತನ

ಶಿವಮೊಗ್ಗ,ಅ.23 : ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್‌ ಟವರ್‌ (Tower) ಕಳ್ಳತನವಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಟಿಪ್ಪು ನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್‌ ಟವರ್‌ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ನ ನಿರ್ವಹಣೆ ಮಾಡುತ್ತಿತ್ತು. ಕೋವಿಡ್‌ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ.
ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್‌ ಟವರ್‌ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳೆ ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟವರ್‌ ಮತ್ತು ಬಿಡಿ ಭಾಗಗಳ ಅಂದಾಜು ಮೌಲ್ಯ 46.30 ಲಕ್ಷ ರೂ. ಎಂದು ಉಲ್ಲೇಖಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST