LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​

ಬೆಂಗಳೂರು: ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​ ಡ್ರಿಲ್​​ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ.

ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು, ಕಾರವಾರ, ರಾಯಚೂರಿನಲ್ಲಿ ನಾಳೆ ಸಂಜೆ 4 ಗಂಟೆ ಮಾಕ್​ಡ್ರಿಲ್​ಗೆ ನಿರ್ಧಾರ ಮಾಡಿದ್ದೇವೆ. ಈ ಕುರಿತಾಗಿ ಈಗಾಗಲೇ ಅಗ್ನಿಶಾಮಕದಳ, ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ‌ ಎಂದು ತಿಳಿಸಿದ್ದಾರೆ.

ಮಾಕ್ ​ಡ್ರಿಲ್​ನಲ್ಲಿ ಎನ್​​ಸಿಸಿ, ಎನ್​​ಎಸ್​​ಎಸ್​, ಸಿವಿಲ್‌ ಡಿಫೆನ್ಸ್ ಮತ್ತು ವೈದ್ಯರು ಭಾಗಿಯಾಗುತ್ತಾರೆ. ಪೊಲೀಸ್ ಠಾಣೆ, ಅಗ್ನಿಶಾಮಕ ದಳ ಠಾಣೆ ಸೇರಿ 35 ಕಡೆ ಸೈರನ್​ ಇದೆ, ಅದರಲ್ಲಿ 32 ಕಾರ್ಯ ನಿರ್ವಹಿಸುತ್ತಿವೆ. ಜನರು ಏನು ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST