Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಧುನಿಕ ಮೈಸೂರು ನಿರ್ಮಾಪಕ ನಾಲ್ವಡಿಯವರು ದೇವತಾ ಪುರುಷರು

 ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ :
ಆಧುನಿಕ ಮೈಸೂರು ನಿರ್ಮಾಪಕರಾದ ನಾಲ್ವಡಿ ಯವರು ದೇವತಾ ಪುರುಷರು. ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರು, ಕಲೆ, ಸಾಹಿತ್ಯ, ಸಂಗೀತ, ನೃತ್ಯ, ವಾಸ್ತುಶಿಲ್ಪ, ನೀರಾವರಿ,ಶಿಕ್ಷಣ ಸೇತುವೆ ನಿರ್ಮಾಣ, ತಂತ್ರಜ್ಞಾನ, ವಿಜ್ಞಾನ,ಮಹಿಳಾ ಅಭಿವೃದ್ಧಿ, ಮಕ್ಕಳ ಅಭಿವೃದ್ಧಿ, ಆರೋಗ್ಯ, ಅರಮನೆಗಳ ನಿರ್ಮಾಣ, ದೇವಾಲಯಗಳ ನಿರ್ಮಾಣದ ಜೊತೆಗೆ  ಸರ್ವ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ನಿರ್ಮಾಣ ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾ ತ್ಯಾಗಿಗಳು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

 ಅವರು ನಗರದ ಪ್ರವಾಸಿ ಮಂದಿರದ ಮುಂಭಾಗ ಪ್ರತಿಷ್ಠಾಪಿಸಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಕನ್ನಡ ಸಾಹಿತ್ಯ ಪರಿಷತ್ತು, ಜೈಹಿಂದ್ ಪ್ರತಿಷ್ಠಾನ, ಋಗ್ವೇದಿ ಯೂತ್ ಕ್ಲಬ್ ಮತ್ತು ಕನ್ನಡ ಸಂಘಟನೆಗಳ ಪರವಾಗಿ ಪುಷ್ಪವನ್ನು ಅರ್ಪಿಸಿ ಗೌರವ ಸಲ್ಲಿಸಿ ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಶ್ವ ಪ್ರಸಿದ್ಧರು.

ಮೈಸೂರು ಪ್ರಾಂತ್ಯಕ್ಕೆ ಅಪಾರ ಗೌರವ ತಂದುಕೊಟ್ಟ ಮಹಾತ್ಮರು. ಒಡೆಯರ್ ವಂಶವೇ ಮಾನವನ ಸಮಗ್ರ ಅಭಿವೃದ್ಧಿಗೆ ಇಡೀ ಜೀವಮಾನವನ್ನು ತ್ಯಜಿಸಿದವರು.

 ಒಡೆಯರ್ ವಂಶದ ಮೂಲಕ ರಾಜ್ಯವನ್ನು ಆಳುವ ಜೊತೆಗೆ ಮಾನವನ ಪ್ರತಿ ಹಂತದ ಬೆಳವಣಿಗೆಗೆ ಕಾರಣೀಭೂತರಾಗಿ ವಿಶ್ವ ಪ್ರಸಿದ್ಧ ವಾಗುವಂತೆ ಮಾಡಿದ ಕೃಷ್ಣರಾಜ ಒಡೆಯರ್ ಕನ್ನಡ ನಾಡು-ನುಡಿ ಜಲ ಭಾಷೆಯ ಸಾಹಿತ್ಯದ ಬೆಳವಣಿಗೆಗೆ ಚಿಂತನೆಗೆ ತಮ್ಮ ದೂರ ದೃಷ್ಟಿಯ ಮೂಲಕ ಸರ್ ಎಂ ವಿಶ್ವೇಶ್ವರಯ್ಯನವರ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಇಂದಿಗೂ ನಾಡಿನ ಜೊತೆಗೆ ವಿಶ್ವದ ಎಲ್ಲೆಡೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕನ್ನಡದ ಸೇವೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಸಾಹಿತಿಗಳು, ಕಲಾವಿದರು, ಕವಿಗಳು, ಲೇಖಕರು, ಚಿಂತಕರು, ಗಾಯಕರು ತಮ್ಮ ಸಾಧನೆ ಮಾಡಲು ಸಾಧ್ಯವಾಗಿದೆ. ನಾಲ್ವಡಿ ಅವರ ದೂರ ದೃಷ್ಟಿ ಅಪಾರ. ಮಾನವ ಕಲ್ಯಾಣದ ಗುರಿ ಇಟ್ಟುಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಜಗತ್ತಿನಲ್ಲಿ ಸರಿಸಾಟಿ ಯಾರು ಇಲ್ಲ ಎಂದು ಬಣ್ಣಿಸಿದರು ಮೈಸೂರು ಪ್ರಾಂತ್ಯದ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ಹಿರಿಯರು ಸ್ಥಾಪಿಸಿರುವುದು ಬಹಳ ಸಂತೋಷವಾದದ್ದು. ಇದಕ್ಕೊಂದು ಸುಂದರ ಸ್ವರೂಪವನ್ನು ಕಟ್ಟಿಕೊಡುವ ಕಾರ್ಯವನ್ನು ಎಲ್ಲರೂ ಸೇರಿ ಮಾಡಬೇಕು ಎಂದು ಮನವಿ ಮಾಡಿದರು.

 ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರು ಹಾಗೂ ಉಪನ್ಯಾಸಕರಾದ ಶಿವರಾಂ ತೆ ಳ್ಳನೂರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ನಾಲ್ವಡಿ ಕೃಷ್ಣರಾಜ ಒಡೆಯರವರ ಸ್ಮರಿಸುವ ಮೂಲಕ ಅವರ ಪ್ರತಿಮೆಗೆ ಗೌರವ ಸಲ್ಲಿಸುವ ಕಾರ್ಯವನ್ನು ಮಾಡಿದ ಅಧ್ಯಕ್ಷರಾದ ಋಗ್ವೇದಿಯವರ ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿ ಕಳೆದ ವರ್ಷದಿಂದ ಈ ಕಾರ್ಯವನ್ನು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಮಾದರಿಯಾಗಿದೆ. ನೂರು ವರ್ಷಗಳ ಹಿಂದೆಯೇ ಪ್ರತಿ ಕ್ಷೇತ್ರದಲ್ಲೂ ಮೀಸಲಾತಿಯನ್ನು ಜಾರಿಗೆ ತರುವ ಮೂಲಕ ಸರ್ವ ಜನಾಂಗದ ಅಭಿವೃದ್ಧಿಗೆ ಕಾರಣರಾದವರು ಮಹಾತ್ಮ ಗಾಂಧೀಜಿಯವರಿಂದ ರಾಜ ಶ್ರೀ ಎಂದು ಕರೆಯಲ್ಪಟ್ಟವರು.

ಪ್ರತಿ ಮನೆ ಮನೆಯಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವೆಯನ್ನು ಸದಾ ಕಾಲ ಸ್ಮರಿಸಿಕೊಳ್ಳುವ ಮೂಲಕ ಅವರಿಗೆ ಧನ್ಯತಾಭಾವವನ್ನು ನೀಡುತ್ತಿದ್ದೇವೆ.ಕನ್ನಡ ಸಾಹಿತ್ಯ ಪರಿಷತ್ತು ನಾಲ್ವಡಿ ಕೃಷ್ಣರಾಜ ಒಡೆಯರವರ ಕೊಡುಗೆಗಳು ಮತ್ತು ಸಾಧನ ಯಾತ್ರೆಗೆ ಶುಭ ಹಾರೈಸಿದರು.

 ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾದ ಜಿ ಬಂಗಾರು ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಧನೆ ಯಾತ್ರೆ ಯಶಸ್ವಿಯಾಗಲಿ. ನಾಲ್ವಡಿ ಕೃಷ್ಣರಾಜ ಒಡೆಯರವರನ್ನು ಸರ್ವರು ಸ್ಮರಿಸಿ ರಿಸಿಕೊಳ್ಳೋಣ  ಎಂದರು.

 ಕನ್ನಡ ಸಾಹಿತ್ಯ ಪರಿಷತ್ತಿನ ಶಿವಲಿಂಗ ಮೂರ್ತಿ  ಕೃಷ್ಣರಾಜ ಒಡೆಯರ್ ಅವರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪ ಅರ್ಪಿಸಿ, ಘೋಷಣೆಗಳನ್ನು ಕೂಗುವ ಮೂಲಕ ಗೌರವ ನಮನ  ಸಲ್ಲಿಸಲಾಯಿತು.

 ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಬಿಕೆ ಆರಾಧ್ಯ ಸರಸ್ವತಿ, ದೊರೆಸ್ವಾಮಿ ಕೊಳ್ಳೇಗಾಲದ ಪ್ರಮೋದ್,  ದೊಡ್ಡಶೆಟ್ಟಿ ಇದ್ದರು.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ