Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದಾಖಲೆ ಬರೆದ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ 8,931 ದಿನ ಪೂರ್ಣ

ನವದೆಹಲಿ: ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ 8,931 ದಿನಗಳನ್ನು ಪೂರೈಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನದಲ್ಲಿ ದಾಖಲೆ ಬರೆದಿದ್ದಾರೆ.

ಪವನ್ ಕುಮಾರ್ ಚಾಮ್ಮಿಂಗ್ ಅವರು ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನ ಪೂರೈಸುವ ಮೂಲಕ ದೇಶದಲ್ಲಿಯೇ ದೀರ್ಘಾವಧಿಗೆ ಸರ್ಕಾರದ ಮುಖ್ಯಸ್ಥರಾಗಿದ್ದ ಖ್ಯಾತಿ ಹೊಂದಿದ್ದರು. ಇದೀಗ ಮೋದಿ ಅವರು ಚಾಮ್ಮಿಂಗ್ ದಾಖಲೆಯನ್ನು ಮುರಿದಿದ್ದಾರೆ.

ಪ್ರಸ್ತುತ ಮೂರನೇ ಅವಧಿಗೆ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ ಸಿಂಗ್, ಕಿರಣ್ ರಿಜಿಜು ಸೇರಿದಂತೆ ಬಿಜೆಪಿಯ ಹಲವು ನಾಯಕರು ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಅಮಿತ್ ಶಾ ಶ್ಲಾಘನೆ:
ಪ್ರಧಾನಿ ಮೋದಿ ಅವರು ಸಾರ್ವಜನಿಕ ಜೀವನದಲ್ಲಿ ದಾಖಲೆ ಬರೆದಿದ್ದಾರೆ. ಅವರಲ್ಲಿ ಸೇವಾ ಮನೋಭಾವ, ಕಠಿಣ ಪರಿಶ್ರಮ ಮತ್ತು ಬದ್ಧತೆ ಬೇರೂರಿದೆ ಎಂದು ಗೃಹ ಸಚಿವ ಅಮಿತ್ ಶಾ ಭಾನುವಾರ ಶ್ಲಾಘಿಸಿದ್ದಾರೆ.

'ಮೊದಲು ಗುಜರಾತ್‌ನ ಮುಖ್ಯಮಂತ್ರಿಯಾಗಿ ಪ್ರಸ್ತುತ ದೇಶದ ಪ್ರಧಾನಿಯಾಗಿರುವ ಮೋದಿ ಅವರ ದಶಕಗಳ ಸೇವೆಯು ಅವರದ್ದೇ ಆದ ಯುಗವನ್ನು ರೂಪಿಸಿದೆ. ಬಡವರಿಗೆ ಹಕ್ಕುಗಳನ್ನು ದೊರಕಿಸಿಕೊಟ್ಟು, ಅಭಿವೃದ್ಧಿಯಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿ, ಜಾಗತಿಕ ವೇದಿಕೆಯಲ್ಲಿ ಭಾರತದ ಘನತೆಯನ್ನು ಹೆಚ್ಚಿಸುವ ಮೂಲಕ ಮೋದಿ ಯುಗವು ಭಾರತದಲ್ಲಿ ಪರಿವರ್ತನೆ ಉಂಟುಮಾಡಿದೆ' ಎಂದು ಶಾ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

*24 ವರ್ಷಗಳಿಂದ ಯಾವುದೇ ರಜೆ ತೆಗೆದುಕೊಳ್ಳದೆ ದೇಶ ಮತ್ತು ಜನರಿಗಾಗಿ ಸೇವೆ ಮಾಡುತ್ತಿರುವುದು ಅವರ ಬದ್ಧತೆಯ ಪ್ರತೀಕವಾಗಿದೆ. ಇದು ಅವರಿಗೆ ಜನ ನೀಡಿರುವ ಪ್ರೀತಿಯನ್ನು ತೋರಿಸುತ್ತದೆ' ಎಂದು ಹೇಳಿದ್ದಾರೆ.

ಮೋದಿ ಅಧಿಕಾರದ ಹಾದಿ

* 2001ರ ಅಕ್ಟೋಬರ್ 7- ಮೊದಲ ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಆಯ್ಕೆ

* ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಣೆ

* 2014ರ ಮೇ 26 - ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

* ಪ್ರಸ್ತುತ ಮೂರನೇ ಬಾರಿ ಪ್ರಧಾನಿಯಾಗಿ ಕಾರ್ಯನಿರ್ವಹಣೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ