LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೋದಿ ಅದಾನಿಯನ್ನು ರಕ್ಷಣೆ ಮಾಡುತ್ತಿದ್ದಾರೆ : ಗೌತಮ್ ಅದಾನಿ ಬಂಧನಕ್ಕೆ ರಾಹುಲ್ ಗಾಂಧಿ ಒತ್ತಾಯ..!

ನವದೆಹಲಿ : ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯೂಯಾರ್ಕ್ ಯುಎಸ್ ಜಿಲ್ಲಾ ನ್ಯಾಯಾಲಯ ಭಾರತದ ಬಿಲಿಯನೇರ್ ಗೌತಮ್ ಅದಾನಿ ಅವರ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ.

ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಸದ್ಯ ಅದಾನಿ ವಿರುದ್ಧದ ಅರೆಸ್ಟ್ ವಾರಂಟ್ ಕಾಂಗ್ರೆಸ್-ಬಿಜೆಪಿ (BJP) ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿ, ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಆರೋಪ ಬಂದ ತಕ್ಷಣವೇ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿಯನ್ನೇ ಬಂಧಿಸಲಾಗಿತ್ತು. ಆದರೆ, ಪ್ರಧಾನಿ ಮೋದಿಯಿಂದಾಗಿ ಅದಾನಿಗೆ ರಕ್ಷಣೆ ದೊರೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್‌ರನ್ನೂ ತನಿಖೆಗೆ ಒಳಪಡಿಸಬೇಕು. ಅಲ್ಲದೆ, ಈ ಕುರಿತು ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಜಂಟಿ ಸದನ ಸಮಿತಿ ತನಿಖೆಗೆ ಒತ್ತಾಯಿಸುತ್ತೇವೆ ಎಂದು ಆಗ್ರಹಿಸಿದ್ದಾರೆ. ಇನ್ನೂ ರಾಹುಲ್ ಟೀಕೆಗೆ ಬಿಜೆಪಿ ತಿರುಗೇಟು ಕೊಟ್ಟಿದೆ. ದೇಶವನ್ನು ನಿಂದಿಸಲು ರಾಹುಲ್ ಗಾಂಧಿ ಈ ತಂತ್ರ ಬಳಸುತ್ತಿದ್ದಾರೆ ಎಂದು ಕಿಡಿಕಾರಿದೆ. ಆರೋಪ? ಅಧಿಕಾರಿಗಳಿಗೆ ಲಂಚ ನೀಡಿ ಹೂಡಿಕೆದಾರರನ್ನು ವಂಚಿಸಿದ್ದಾರೆ. ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳ ಮೂಲಕ ಯುಎಸ್ ಹೂಡಿಕೆದಾರರು ಮತ್ತು ಜಾಗತಿಕ ಹಣಕಾಸು ಸಂಸ್ಥೆಗಳಿಂದ ಹಣವನ್ನು ಪಡೆದುಕೊಳ್ಳಲು ಬಹು ಶತಕೋಟಿ ಡಾಲರ್ ಯೋಜನೆಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್?ಗೂ ಅಧಿಕ ಮೊತ್ತದಷ್ಟು ಲಂಚ ನೀಡಿದೆ. ಮುಂದಿನ ಎರಡು ದಶಕಗಳಲ್ಲಿ 2 ಶತಕೋಟಿ ಲಾಭವನ್ನು ಗಳಿಸಲು ಲಂಚ ನೀಡಲಾಗಿದೆ. ಅದಾನಿ ಗ್ರೀನ್ ಎನರ್ಜಿಗಾಗಿ 3 ಶತಕೋಟಿ ಡಾಲರ್ ಸಾಲ ಮತ್ತು ಬಾಂಡ್‌ಗಳನ್ನು ಪಡೆಯಲು ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಕಾರ್ಯನಿರ್ವಾಹಕ ವಿನೀತ್ ಜೈನ್ ಹೂಡಿಕೆದಾರರರಿಗೆ ಹಲವಾರು ವಿಷಯಗಳನ್ನು ಮರೆಮಾಡಿ ವಂಚಿಸಿದ್ದಾರೆ. ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರವಿದ್ಯುತ್ ಗುತ್ತಿಗೆ ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ (ಅಂದಾಜು 2238 ಕೋಟಿ ರೂ.) ಹೆಚ್ಚು ಲಂಚದ ಭರವಸೆ ನೀಡಿದ್ದರು ಎಂದು ಆರೋಪಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಎಸ್ಸಿ. ಪದವಿ ಪಠ್ಯದಲ್ಲಿ ಸಾಹಿತಿ ಡಾ.ಬಿ.ಎಲ್.ವೇಣುರವರ ಕಥೆ ಸೇರ್ಪಡೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 05-08-2025.!!ಪುತ್ರದಾ ಏಕಾದಶಿ ದಿನ ದಂಪತಿಗಳು ಹೀಗೆ ಮಾಡಿದರೆ ಸಂತಾನ ಪ್ರಾಪ್ತಿ.!ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿ