LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ವಿದೇಶಿ ಶಕ್ತಿಗಳಿಲ್ಲದೆ ನಡೆಯುವ ಮೊದಲ ಅಧಿವೇಶನ'- ರಾಹುಲ್​ಗೆ ಮೋದಿ ತಿರುಗೇಟು

ನವದೆಹಲಿ :ಹತ್ತು ವರ್ಷಗಳಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟಿದ್ದಾರೆ.

2014 ರಿಂದ, ಇದು ಮೊದಲ ಸಂಸತ್ ಅಧಿವೇಶನವಾಗಿದ್ದು, ನಮ್ಮ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪ ಕಂಡುಬಂದಿಲ್ಲ, ಇದರಲ್ಲಿ ಯಾವುದೇ ವಿದೇಶಿ ಶಕ್ತಿಗಳಿಲ್ಲ. ಪ್ರತಿ ಬಜೆಟ್ ಅಧಿವೇಶನಕ್ಕೂ ಮುನ್ನ ನಾನು ಇದನ್ನು ಗಮನಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.

2014ರಿಂದಲೂ ಯಾವುದಾದರೂ ಒಂದು ವಿಚಾರವನ್ನಿಟ್ಟುಕೊಂಡು ತೊಂದರೆ ಸೃಷ್ಟಿಸಲು ಕೆಲವರು ಸಿದ್ಧರಿರುತ್ತಿದ್ದರು. ಆದರೆ 10 ವರ್ಷಗಳ ಬಳಿಕ ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ಅಧಿವೇಶನ ನಡೆಯುತ್ತಿದೆ. 2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸುತ್ತದೆ ಎಂದು ನಾನು ವಿಶ್ವಾಸದಿಂದ ಹೇಳ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST