Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಮೆರಿಕ–ಇರಾನ್ ಒಪ್ಪಂದಕ್ಕೆ ಮೋದಿ ಸ್ವಾಗತ

ಹೊಸದಿಲ್ಲಿ, ಜೂ.15 : ಮಧ್ಯಪ್ರಾಚ್ಯದಲ್ಲಿ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಸಂಘರ್ಷಕ್ಕೆ ತೆರೆ ಎಳೆಯುವ ಉದ್ದೇಶದಿಂದ ಅಮೆರಿಕ ಮತ್ತು ಇರಾನ್ ನಡುವೆ ಮೂಡಿರುವ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.

ಈ ಒಪ್ಪಂದದ ಅನುಷ್ಠಾನದಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರುಸ್ಥಾಪನೆಯಾಗುವ ಜೊತೆಗೆ, ಜಾಗತಿಕ ವ್ಯಾಪಾರ ಮತ್ತು ಸಮುದ್ರ ಸಂಚಾರಕ್ಕೆ ಎದುರಾಗಿದ್ದ ಅಡಚಣೆಗಳು ನಿವಾರಣೆಯಾಗಲಿವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಸ್ಲೋವಾಕಿಯಾದ ರಾಜಧಾನಿ ಬ್ರಾಟಿಸ್ಲಾವಾದಿಂದ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದು, ಮಧ್ಯಪ್ರಾಚ್ಯ ಸಂಘರ್ಷದಿಂದ ವಿಶ್ವದಾದ್ಯಂತ ಆರ್ಥಿಕ ವ್ಯತ್ಯಯ ಉಂಟಾಗಿದ್ದು, ಹಲವು ದೇಶಗಳಲ್ಲಿ ಜೀವಹಾನಿಯೂ ಸಂಭವಿಸಿದೆ ಎಂದು ಹೇಳಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ಅಂತ್ಯಗೊಳಿಸುವ ಕುರಿತು ಮೂಡಿರುವ ಪರಸ್ಪರ ಒಪ್ಪಂದವನ್ನು ಭಾರತ ಸ್ವಾಗತಿಸುತ್ತದೆ. ಈ ತಿಳುವಳಿಕೆಯ ಅನುಷ್ಠಾನದಿಂದ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸಲಿ ಎಂಬುದು ಭಾರತದ ಆಶಯವಾಗಿದೆ ಎಂದು ತಿಳಿಸಿದ್ದಾರೆ.

ಸಾಗರ ಸಂಚಾರಕ್ಕೆ ಹೊಸ ನಿರಾಳತೆ

ಹಾರ್ಮುಝ್ ಜಲಸಂಧಿಯ ಪುನರಾರಂಭದಿಂದ ಸಮುದ್ರ ಮಾರ್ಗದ ಸಂಚಾರ ಹಾಗೂ ಜಾಗತಿಕ ವ್ಯಾಪಾರಕ್ಕೆ ಹೊಸ ಚೈತನ್ಯ ದೊರೆಯಲಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಸಾಗರ ಮಾರ್ಗಗಳ ಸ್ವಾತಂತ್ರ್ಯ ಮತ್ತು ವ್ಯಾಪಾರದ ನಿರಂತರ ಹರಿವು ಜಾಗತಿಕ ಆರ್ಥಿಕತೆಗೆ ಅತ್ಯಂತ ಅಗತ್ಯವಾಗಿದೆ. ಈ ಒಪ್ಪಂದವು ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ನೊಂದಿಗಿನ ಒಪ್ಪಂದ ಪೂರ್ಣಗೊಂಡಿದೆ ಎಂದು ಘೋಷಿಸಿದ್ದರು. ಜೂ.19ರಂದು ಅಧಿಕೃತ ಸಹಿ ಪ್ರಕ್ರಿಯೆ ನಡೆಯಲಿದ್ದು, ಹಾರ್ಮುಝ್ ಜಲಸಂಧಿಯನ್ನು ಜಾಗತಿಕ ಹಡಗು ಸಂಚಾರಕ್ಕೆ ಪುನಃ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ಇರಾನ್ ಬಂದರುಗಳ ಮೇಲಿನ ಅಮೆರಿಕದ ನಿರ್ಬಂಧಗಳನ್ನು ತೆರವುಗೊಳಿಸಲಾಗುವುದು. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್‌ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ ಎಂದು ಟ್ರಂಪ್ ಸಂದೇಶ ನೀಡಿದ್ದರು.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಅಮೆರಿಕ–ಇರಾನ್ ಒಪ್ಪಂದವನ್ನು ದೃಢಪಡಿಸಿದ್ದಾರೆ. ಲೆಬನಾನ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿನ ಸೇನಾ ಕಾರ್ಯಾಚರಣೆಗಳನ್ನು ತಕ್ಷಣ ಮತ್ತು ಶಾಶ್ವತವಾಗಿ ಸ್ಥಗಿತಗೊಳಿಸುವ ಅಂಶ ಒಪ್ಪಂದದಲ್ಲಿ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ