LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'15 ವರ್ಷಗಳ 'ಮಹಾ ಜಂಗಲ್ ರಾಜ್' ಯುಗವನ್ನ ಕೊನೆಗೊಳಿಸ್ತಾರೆ'- ಮೋದಿ

ಕೋಲ್ಕತ್ತಾ: ಹೃದಯ ಹೀನ ತೃಣಮೂಲ ಕಾಂಗ್ರೆಸ್‌ಗೆ ಜನ ಸದ್ಯದಲ್ಲೇ ತಕ್ಕ ಪಾಠ ಕಲಿಸುತ್ತಾರೆ. 15 ವರ್ಷಗಳ 'ಮಹಾ ಜಂಗಲ್ ರಾಜ್' ಯುಗವನ್ನ ಕೊನೆಗೊಳಿಸುತ್ತಾರೆ. ಏಕೆಂದ್ರೆ ಬಿಜೆಪಿ ಮಾತ್ರ ಬಂಗಾಳ ಅಭಿವೃದ್ಧಿಯ ಬಗ್ಗೆ ನಿಜವಾದ ಕಾಳಜಿ ಹೊಂದಿದೆ ಎಂಬುದು ಗೊತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಬಂಗಾಳದ ಹೂಗ್ಲಿಯ ಸಿಂಗೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ನಿಜವಾದ ಬದಲಾವಣೆಯನ್ನ ಜನ ಬಯಸಿದ್ದಾರೆ, ಅದಕ್ಕಾಗಿ ಎಲ್ಲಾ ವರ್ಗದ ಜನರು ಒಟ್ಟುಗೂಡಿದ್ದಾರೆ. ಬಿಜೆಪಿ ಆಡಳಿತದಲ್ಲಿ ಬಂಗಾಳಿಗೆ ಪ್ರಾದೇಶಿಕ ಭಾಷೆಯ ಪ್ರಾಮುಖ್ಯತೆ ನೀಡಲಾಯಿತು. ದುರ್ಗಾ ಪೂಜೆಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಸಿಗುವಂತೆ ಮಾಡಲಾಯಿತು. ದೆಹಲಿಯ ಕರ್ತವ್ಯ ಪಥ್‌ನಲ್ಲಿರುವ ಇಂಡಿಯಾ ಗೇಟ್ ಮುಂಭಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನೂ ಸ್ಥಾಪಿಸಲಾಯಿತು. ಆದ್ರೆ ಟಿಎಂಸಿ ಕಾಂಗ್ರೆಸ್ ಸರ್ಕಾರದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗ ಇದ್ಯಾವುದನ್ನೂ ಮಾಡಲಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಟಿಎಂಸಿಗೆ ಬಿಜೆಪಿ ಮೇಲೆ ದ್ವೇಷ ಇದೆ. ಆದ್ರೆ ಬಿಜೆಪಿಯೊಂದಿಗಿನ ತನ್ನ ದ್ವೇಷವು ಪಶ್ಚಿಮ ಬಂಗಾಳದ ಜನರ ಮೇಲೆ ಬೀರುತ್ತಿದೆ. ಟಿಎಂಸಿಗೆ ಮೋದಿ ಮತ್ತು ಬಿಜೆಪಿಯೊಂದಿಗೆ ಭಿನ್ನ ಇರಬಹುದು, ಆದ್ರೆ ಇದು ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದೆ. ಇಲ್ಲಿನ ಮೀನುಗಾರರ ಕಲ್ಯಾಣಕ್ಕಾಗಿ ಟಿಎಂಸಿ ಕೇಂದ್ರ ಬಿಜೆಪಿಯೊಂದಿಗೆ ಸಹಕರಿಸುತ್ತಿಲ್ಲ. ಆದ್ದರಿಂದ ಮೀನುಗಾರರು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಪ್ರಯೋಜನಗಳನ್ನ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ಪಿಎಂ ಶ್ರೀ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನೂ ಮಮತಾ ಬ್ಯಾನರ್ಜಿ ಸರ್ಕಾರ ನಿರಾಕರಿಸುತ್ತಿದೆ" ಎಂದು ಕಿಡಿಕಾರಿದ್ದಾರೆ.

"ಟಿಎಂಸಿ 'ಮಹಾ ಜಂಗಲ್ ರಾಜ್' ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಅಕ್ರಮ ಒಳನುಸುಳುವಿಕೆ, ಮಾಫಿಯಾ ಆಡಳಿತಕ್ಕೆ ಮುಕ್ತ ಸ್ವಾತಂತ್ರ‍್ಯ ನೀಡಲಾಗಿದೆ. ಟಿಎಂಸಿ ಅಧಿಕಾರದಲ್ಲಿ ಇರೋವರೆಗೆ ಯುವಕರಿಗೆ ಗುಣಮಟ್ಟದ ಶಿಕ್ಷಣ, ಉದ್ಯೋಗ ಸಿಗೋದಿಲ್ಲ. ಬಂಗಾಳ ಜನರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಕ್ಕಾಗಿ ಟಿಎಂಸಿ ಸರ್ಕಾರವನ್ನ ಶಿಕ್ಷಿಸಲೇಬೇಕು. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರವನ್ನ ಅಧಿಕಾರಕ್ಕೆ ತರಬೇಕು" ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026