LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ

ಚಾಂಪಿಯನ್ಸ್ ಟ್ರೋಫಿಗಾಗಿ ಪರಿಷ್ಕೃತ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ಈ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದೆ. ಇಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲು ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.

ಹೀಗಾಗಿ ಜಸ್​ಪ್ರೀತ್ ಬುಮ್ರಾ ಬದಲಿಗೆ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗೆಯೇ 15 ಸದಸ್ಯರ ಬಳಗದಲ್ಲಿದ್ದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಟ್ಟಿದ್ದು, ಅವರ ಬದಲಿಗೆ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಬದಲಾವಣೆಯಲ್ಲದೇ ಮೂವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

ಹೀಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅವರು ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದ ಖಾಯಂ ಸದಸ್ಯರಾಗಿದ್ದ ಸಿರಾಜ್ ಅವರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಿರಲಿಲ್ಲ. ಇದೀಗ ಪರಿಷ್ಕೃತ ತಂಡದ ಪ್ರಕಟಣೆ ವೇಳೆ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಲಾಗಿರುವುದು ವಿಶೇಷ.

ಇನ್ನು ಮೊಹಮ್ಮದ್ ಸಿರಾಜ್ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಸಹ ಮೀಸಲು ಆಟಗಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಇದಾಗ್ಯೂ ಈ ಮೂವರು ಆಟಗಾರರು ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಜೊತೆ ತೆರಳುವುದಿಲ್ಲ. ಬದಲಾಗಿ ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ.

ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಪ್ರಯಾಣೇತರ ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ 15 ಸದಸ್ಯರಲ್ಲಿ ಯಾರಾದರೂ ಗಾಯಗೊಂಡರೆ, ಬದಲಿ ಆಟಗಾರರಾಗಿ ಇವರು ದುಬೈಗೆ ಪ್ರಯಾಣಿಸಲಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಖರೀದಿಗೆ ನೋದಣಿ ಪ್ರಾರಂಭ.!ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್