LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೋಹನ್ ದಾನಪ್ಪರ ಕಾರ್ಯ ಕಲ್ಯಾಣ ಕರ್ನಾಟಕ ಗರ್ವ ಪಡುವಂತಾಗಿಸಿದೆ- ಸಚಿವ ರಹಿಂಖಾನ್ 

ಬೆಂಗಳೂರು:ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವರಾದ ರಹೀಂ ಖಾನ್ ರವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ!

ಸಚಿವ ರಹೀಂ ಖಾನ್ ರವರ ಪತ್ರದಲ್ಲಿ "ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ ಉಚ್ಛ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಕುಮಾರ್ ದಾನಪ್ಪರವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24 ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ "ಸಲಾಂ ಸೋಲ್ಮರ್ಸ್" ಶೀರ್ಷಿಕೆಯಡಿಯಲ್ಲಿ " ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ" ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ 42 ಕಿಲೋ ಮೀಟರ್ ನಷ್ಟು ಉದ್ದದಷ್ಟು ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿರುವ ತಮಗೆ ಅಭಿನಂದಿಸಲಾಗಿದೆ.

ಸರ್ಕಾರಿ ಸೇವೆಯಲ್ಲಿರುವ ತಾವು ಸೇವೆಯೊಂದಿಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕ್ರೀಡೆಯ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ,ತಮ್ಮ ಈ ಕಾರ್ಯ ಮತ್ತು ಸಾಧನೆ ತಮ್ಮ ದೇಶ ಪ್ರೇಮವನ್ನು ಎತ್ತಿ ತೋರಿಸುತ್ತಿದೆ, ತಮ್ಮ ಈ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್‌, ಬ್ರಾವೊ ಇಂಟರ್ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್, ಹಾರ್ವಡ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ಸೇರಿರುವುದು ದೇಶಕ್ಕೆ ಮತ್ತು ರಾಜ್ಯಕ್ಕೆ, ಹಮ್ಮೆಯ ವಿಷಯವಾಗಿರುತ್ತದಲ್ಲದ ಕಲ್ಯಾಣ ಕರ್ನಾಟಕಕ್ಕೆ, ಗರ್ವ ಪಡುವಂತ ಸಂಗತಿಯಾಗಿದೆ ಎಂದರು.

ಇಂತಹ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಸಂತಸ ತಂದಿದೆ ಮುಂದಿನ ದಿನಗಳಲ್ಲಿ ತಾವು ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದ ಕೀರ್ತಿ ಇನ್ನಷ್ಟು ಎತ್ತರಕ್ಕೆ ಏರುವಂತಾಗಲಿ ಎಂದು ಸಚಿವ ರಹೀಂ ಖಾನ್ ಹಾರೈಸಿ ಅಭಿನಂದಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭ