LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ದೂರುಗಳ ಪ್ರಾಧಿಕಾರದ ಆದೇಶ ತೀರ್ಪುಗಳನ್ನು ಕನ್ನಡದಲ್ಲಿ ಹೊರಡಿಸಿ -ಮೋಹನ್ ಕುಮಾರ್ ದಾನಪ್ಪ

ಬೆಂಗಳೂರು: ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯಲೋಪ ಮತ್ತು ಗಂಭೀರ ದುರ್ನಡತೆ, ಅಧಿಕಾರ ದುರ್ಬಳಕೆ ಸೇರಿದಂತೆ ಪೊಲೀಸ್ ದೌರ್ಜನ್ಯ ವಿರುದ್ದ ಸಲ್ಲಿಸುವ ದೂರುಗಳ ಆದೇಶಗಳನ್ನು ಕನ್ನಡದಲ್ಲೇ ಹೊರಡಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ಜಸ್ಟೀಸ್ ಎನ್.ಕೆ.ಸುಧೀಂದ್ರ ರಾವ್ ರವರಿಗೆ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ!.

ರಾಜ್ಯದಿಂದ ದೂರುಸಲ್ಲಿಸುವ ದೂರುದಾರರು ಬಹುತೇಕ ಕೆಳ ಮತ್ತು ಮಧ್ಯಮ ವರ್ಗದವರಾಗಿದ್ದು ಬಹುತೇಕ ಜನರು ಪೂರಕ ಶಿಕ್ಷಣ ಪಡೆದವರಾಗಿದ್ದು ಗ್ರಾಮೀಣ ಭಾಗದವರಾಗಿರುತ್ತಾರೆ, ಕೆಲವರು ದೂರು ಬರೆಯಲು ಶಕ್ತರಾದರೆ ಇನ್ನು ಕೆಲವರು ಶಿಕ್ಷಣವಂತರ ಹಾಗೂ ವಕೀಲರ ಸಹಾಯದಿಂದ ದೂರು ಬರೆಯಿಸಿ ಪ್ರಾಧಿಕಾರದಲ್ಲಿ ಸಲ್ಲಿಸುತ್ತಿದ್ದು, ವಿಚಾರಣೆ ಕೈಗೊಂಡ ಸಂದರ್ಭದಲ್ಲಿ ಆಂಗ್ಲ ಭಾಷೆಯಲ್ಲಿ ಆದೇಶ ಘೋಷಣೆ ಮತ್ತು ದೂರಿನ ಅಂತಿಮ ಆದೇಶ/ನಡಾವಳಿಗಳನ್ನು ಆಂಗ್ಲಭಾಷೆಯಲ್ಲಿ ಹೊರಡಿಸುತ್ತಿರುವುದರಿಂದ ದೂರುದಾರರಿಗೆ ಅರ್ಥವಾಗದೇ ನಡಾವಳಿಯಲ್ಲಿನ ವಿಷಯ ತಿಳಿಯಲು ಕಷ್ಟಕರವಾಗಿರುತ್ತದಲ್ಲದೆ ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇರುತ್ತದೆ.

ಸಾರ್ವಜನಿಕ ಹಿತಾದೃಷ್ಟಿಯಿಂದ ಪ್ರಾಧಿಕಾರದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಂತೆ ಪ್ರಸ್ತುತ ಬಾಕಿ ಇರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಆದೇಶ/ತೀರ್ಪುಗಳನ್ನು ಕನ್ನಡದಲ್ಲೇ ಹೊರಡಿಸುಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಒತ್ತಾಯಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ