LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಶು ಆಸ್ಪತ್ರೆಗೆ ತಾನಾಗೆ ಬಂದು ಚಿಕಿತ್ಸೆ ಪಡೆದ ಮಂಗ!

ಬಾಗಲಕೋಟೆ: ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.

ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ.

ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.

ಗುದದ್ವಾರದಲ್ಲಿನ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ. ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಗುದದ್ವಾರದ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ.

ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026