LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ಮತ್ತೆ ಮುಂಗಾರು ಮಳೆಯ ಆರ್ಭಟ.!

 

 

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯು 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಶುರುವಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು, ಗುರುವಾರದಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.

ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026