LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಹೊರತುಪಡಿಸಿ ಬೇರೆ ಕಡೆಗಳಲ್ಲಿ ಅಷ್ಟೊಂದು ಮಳೆಯಾಗಿರಲಿಲ್ಲ. ಇದೀಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026