Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಯಾದಗಿರಿ ಜಿಲ್ಲೆಯಲ್ಲಿ 8,500ಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿ ಅರ್ಜಿಗಳು ಬಾಕಿ

ಯಾದಗಿರಿ ಜಿಲ್ಲೆಯಲ್ಲಿ 8,500ಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿ ಅರ್ಜಿಗಳು ಬಾಕಿ

2,600 ಚೀಟಿಗಳಿಗೆ ಮಾತ್ರ ಗುರಿ ನಿಗದಿ: ಸಾವಿರಾರು ಬಡವರಿಗೆ ವಂಚನೆ ಭೀತಿ

ಅನುಮೋದನೆ ಹೆಸರಲ್ಲಿ ಹಣ ಸುಲಿಗೆ ಆರೋಪಗಳು

ಯಾದಗಿರಿ :ಜಿಲ್ಲೆಯಲ್ಲಿ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಲಾದ 8,500ಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿದ್ದು, ಸರ್ಕಾರ 2,600 ಬಿಪಿಎಲ್ ಪಡಿತರ ಚೀಟಿಗಳಿಗೆ ಮಾತ್ರ ಅನುಮೋದನೆ ನೀಡುವಂತೆ ಗುರಿ ನಿಗದಿಪಡಿಸಿರುವುದರಿಂದ ಸಾವಿರಾರು ಅರ್ಹ ಫಲಾನುಭವಿಗಳು ಪಡಿತರ ಚೀಟಿಯಿಂದ ವಂಚಿತರಾಗುವ ಆತಂಕ ಎದುರಾಗಿದೆ.

ಜಿಲ್ಲೆಯಲ್ಲಿ ಕೆಲ ತಿಂಗಳುಗಳ ಹಿಂದೆ ಅನರ್ಹ ಅಂತ್ಯೋದಯ ಮತ್ತು ಬಿಪಿಎಲ್ ಸೇರಿ ಒಟ್ಟು 4,489 ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿತ್ತು. ಈ ಸಂಖ್ಯೆಯನ್ನು ಮೀರದಂತೆ ಮಾತ್ರ ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗಳಿಗೆ ಅನುಮೋದನೆ ನೀಡಬೇಕು ಎಂಬ ಷರತ್ತನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಷರತ್ತೇ ಈಗ ದೊಡ್ಡ ಸಮಸ್ಯೆಗೆ ಕಾರಣವಾಗಿದೆ.

8,583 ಅರ್ಜಿಗಳು ಬಾಕಿ

2025ರ ಡಿಸೆಂಬರ್ 4ರ ತನಕ ಜಿಲ್ಲೆಯಲ್ಲಿ ಒಟ್ಟು 8,583 ಹೊಸ ಬಿಪಿಎಲ್ ಪಡಿತರ ಚೀಟಿ ಅರ್ಜಿಗಳು ಬಾಕಿ ಉಳಿದಿವೆ. ಈ ಪೈಕಿ 1,266 ಅರ್ಜಿಗಳನ್ನು ಈಗಾಗಲೇ ತಿರಸ್ಕರಿಸಲಾಗಿದೆ. ಇನ್ನು 5,187 ಅರ್ಜಿಗಳ ಸಂಬಂಧ ಇನ್ನೂ ಕ್ರಮ ಜರುಗಿಸಬೇಕಾಗಿದೆ.

ಇದುವರೆಗೆ ಅಧಿಕಾರಿಗಳು 4,829 ಅರ್ಜಿಗಳ ಪರಿಶೀಲನೆ ನಡೆಸಿದ್ದು, 3,637 ಅರ್ಜಿಗಳು ಬಿಪಿಎಲ್ ಪಡಿತರ ಚೀಟಿಗೆ ಅರ್ಹವಾಗಿವೆ ಎಂದು ವರದಿ ಸಲ್ಲಿಸಿದ್ದಾರೆ. ಆದರೆ, ಇನ್ನುಳಿದ 3,754 ಅರ್ಜಿಗಳ ಪರಿಶೀಲನೆ ಇನ್ನೂ ಬಾಕಿಯಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅನುಮೋದನೆ ಆರಂಭ, ಆದರೆ ಸೀಮಿತ ಸಂಖ್ಯೆಗೆ ಮಾತ್ರ

ಅನರ್ಹ ಪಡಿತರ ಚೀಟಿಗಳ ರದ್ದು ಪ್ರಕ್ರಿಯೆ ಮುಗಿದ ಬಳಿಕ, ವರ್ಷಗಳಿಂದ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಬಡವರಿಗೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಪಡಿತರ ಚೀಟಿ ಅನುಮೋದನೆ ಪ್ರಕ್ರಿಯೆ ಆರಂಭಗೊಂಡಿದ್ದು, ಪರಿಶೀಲನೆಗೊಂಡ 4,829 ಅರ್ಜಿಗಳ ಪೈಕಿ 2,130 ಅರ್ಜಿಗಳಿಗೆ ಮಾತ್ರ ಇದುವರೆಗೆ ಅನುಮೋದನೆ ನೀಡಲಾಗಿದೆ.

ಆದರೆ, 2,600 ಚೀಟಿಗಳ ಗುರಿ ನಿಗದಿಯಿಂದಾಗಿ ಅರ್ಹರಾಗಿದ್ದರೂ ಸಾವಿರಾರು ಫಲಾನುಭವಿಗಳು ಪಡಿತರ ಚೀಟಿಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂಬ ಆರೋಪಗಳು ಕೇಳಿಬಂದಿವೆ.

ಹಣ ಸುಲಿಗೆ ಆರೋಪಗಳು ಗಂಭೀರ

ಹೊಸ ಬಿಪಿಎಲ್ ಪಡಿತರ ಚೀಟಿಗೆ ಅನುಮೋದನೆ ನೀಡಲು ವಿಧಿಸಿರುವ ಷರತ್ತನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕೆಲವು ಅಧಿಕಾರಿಗಳು ಬಡವರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಬಿಪಿಎಲ್ ಪಡಿತರ ಚೀಟಿಗೆ ಅನುಮೋದನೆ ನೀಡಲು ಅಧಿಕಾರಿಯೊಬ್ಬರು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಒಂದು ಬೆಳಕಿಗೆ ಬಂದಿದೆ.

ಸರಕಾರದ ನಿಯಮಗಳನ್ನು ಗಾಳಿಗೆ ತೂರಿ, ಮನೆಗೆ ತೆರಳಿ ಪಡಿತರ ಚೀಟಿಗೆ ಅನುಮೋದನೆ ನೀಡುವ ನೆಪದಲ್ಲಿ ಹಣದ ವ್ಯವಹಾರದ ಮಾತುಕತೆ ನಡೆಸಿರುವುದು ಅಕ್ರಮಕ್ಕೆ ಸ್ಪಷ್ಟ ಉದಾಹರಣೆಯಾಗಿ ಪರಿಣಮಿಸಿದೆ. ಈ ಪ್ರಕರಣದ ಕುರಿತು ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಲೂಕುವಾರು ವಿವರ

ಜಿಲ್ಲೆಯಲ್ಲಿ ಎಪಿಎಲ್‌ಗೆ ಪರಿವರ್ತನೆ ಹಾಗೂ ಬಿಪಿಎಲ್‌ಗೆ ಅನುಮೋದನೆ ಪಡೆದ ಪಡಿತರ ಚೀಟಿಗಳ ತಾಲೂಕುವಾರು ವಿವರ ಹೀಗಿದೆ:













































ತಾಲೂಕು ಎಪಿಎಲ್‌ಗೆ ಪರಿವರ್ತನೆ ಬಿಪಿಎಲ್‌ಗೆ ಅನುಮೋದನೆ
ಶಹಾಪುರ 1,175 584
ಸುರಪುರ 952 463
ಯಾದಗಿರಿ 656 443
ಗುರುಮಠಕಲ್ 592 343
ವಡಗೇರಾ 444 201
ಹುಣಸಗಿ 670 96
ಒಟ್ಟು 4,489 2,130

ಕಠಿಣ ಕ್ರಮಕ್ಕೆ ಒತ್ತಾಯ

ಅರ್ಹ ಬಡವರಿಗೆ ಪಡಿತರ ಚೀಟಿ ದೊರಕಿಸಿಕೊಡಲು ಗುರಿ ಮಿತಿಯನ್ನು ತೆಗೆದುಹಾಕಬೇಕು ಹಾಗೂ ಹಣ ಸುಲಿಗೆ ಆರೋಪಗಳಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮತ್ತು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಭಾರಿ ಉಪನಿರ್ದೇಶಕ ರಮೇಶ್ ಕೋಲಾರ್ ಅವರಿಂದ ವರದಿ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.

ಒಟ್ಟಾರೆ, ಬಿಪಿಎಲ್ ಪಡಿತರ ಚೀಟಿ ಅನುಮೋದನೆ ಪ್ರಕ್ರಿಯೆ ಬಡವರಿಗೆ ನೆರವಾಗಬೇಕಿದ್ದರೆ, ಈಗ ಅದೇ ಪ್ರಕ್ರಿಯೆ ಹೊಸ ವಿವಾದ ಮತ್ತು ಅಕ್ರಮಗಳಿಗೆ ಕಾರಣವಾಗುತ್ತಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ