LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೌಂಟ್ ಕಾರ್ಮೆಲ್ ಕಾಲೇಜು ಸಂಸ್ಥಾಪನಾ ದಿನಾಚರಣೆ

ಬೆಂಗಳೂರು: ಸಣ್ಣಕತೆಗಳು ಮನುಷ್ಯನ ಭಾವನೆಗಳಿಗೆ ಸೂಕ್ತ ಅಭಿವ್ಯಕ್ತಿಯ ಮಾಧ್ಯಮವಾಗ ಬಲ್ಲದು ಎಂದು ಅಂತಾರಾಷ್ಟ್ರೀಯಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಪ್ರತಿಪಾದಿಸಿದರು.

ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ  ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಉರ್ದು,ಹಿಂದಿ,ಇಂಗ್ಲಿಷ್,ಅರೇಬಿಕ್  ಮುಂತಾದ ಬಹುಭಾಷೆಯ ಜ್ಞಾನವಿದ್ದರೂ ಕನ್ನಡ ನನ್ನ ಮೆಚ್ಚಿನ ಭಾಷೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಾನು ಬರೆದ ಹಸೀನಾ ಕತೆಯ ಸಿನಿಮಾವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಪ್ರಶಸ್ತಿ ಪಡೆದಿದೆ. ನನ್ನ ಸ್ನೇಹಿತೆ ದೀಪಾ ಬಾಸ್ತಿ ಎದೆಯ ಹಣತೆ ಪುಸ್ತಕವನ್ನು ಓದುವ ಮೂಲಕ ಇಂಗ್ಲಿಷ್‌ಗೆ ಭಾಷಾಂತರಿಸಿದರು.

ನನ್ನ ಎದೆಯ ಪುಸ್ತಕ ಕಾಮನ್ ವೆಲ್ತ್ ಪ್ರಶಸ್ತಿಗೆ ಆಯ್ಕೆಯಾದ ಹದಿಮೂರು ಪುಸ್ತಕದಲ್ಲಿ ಒಂದಾಗಿತ್ತು ಎಂದರು. ಕನ್ನಡದ ಅಕ್ಷರಗಳು ಗೊತ್ತಿಲ್ಲದ ಬಾಲೆ ಕೆಲವೇ ತಿಂಗಳುಗಳಲ್ಲಿ ಕನ್ನಡವನ್ನು ಸಮರ್ಥವಾಗಿ ಕಲಿತು ಬೂಕರ್ ಪ್ರಶಸ್ತಿ ಪಡೆಯುವವರೆಗಿನ ಅನುಭವವನ್ನು ಮತ್ತು ಎದುರಿಸಿದ ಸವಾಲುಗಳನ್ನು ಹಂಚಿಕೊಂಡರು.

ಸಂಸ್ಥಾಪನಾ ದಿನಾಚರಣೆಯ  ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕಿ ಸಿಸ್ಟರ್ ಅಲ್ಲಿನ, ಪ್ರಾಂಶುಪಾಲೆ ಡಾ.ಲೇಖಾ ಚಾರ್ಜ್, ಸಿಸ್ಟರ್ ಆನೆಟ್, ಸಿಸ್ಟರ್ ಆಯೋನ ಸೇರಿದಂತೆ ಮುಂತಾದವರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ