LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ಆಯುರ್ವೇದ ಪದ್ಧತಿಗೆ ಇಂದು ವಿಶ್ವಮಾನ್ಯತೆ -ಸಂಸದ ಗೋವಿಂದ ಎಂ.ಕಾರಜೋಳ

ಚಿತ್ರದುರ್ಗ : ಭಾರತೀಯ ಆಯುರ್ವೇದ ಚಿಕಿತ್ಸಾ ಪದ್ಧತಿಯು ಇಂದು ಜಗತ್ತಿನಾದ್ಯಂತ ಅತ್ಯಂತ ವಿಶ್ವಾಸಾರ್ಹತೆ ಪಡೆದಿದ್ದು, ವಿಶ್ವಮಾನ್ಯತೆ ಗಳಿಸಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದರು.

ಜಿಲ್ಲಾ ಆಯುಷ್ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಘಟಕ, ಬಾಪೂಜಿ ಆಯುರ್ವೇದ ಮಹಾವಿದ್ಯಾಲಯ ಹಾಗೂ ನರಹರಿ ಸೇವಾ ಟ್ರಸ್ಟ್ ಸಹಯೋಗದಲ್ಲಿ ಚಳ್ಳಕೆರೆ ನಗರದ ನರಹರಿ ದೇವಸ್ಥಾನದ ಆವರಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಎರಡು ದಿನಗಳ ಉಚಿತ ಆಯುರ್ವೇದ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.

ಜನರಲ್ಲಿ ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ ನಾಗಸಮುದ್ರ ಮಾತನಾಡಿ, ಜಿಲ್ಲಾ ಆಯುಷ್ ಇಲಾಖೆಯು ಆಯುಷ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸದಾ ಶ್ರಮಿಸುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿಶೇಷ ಶಿಬಿರಗಳ ಆಯೋಜಿಸಲು ಸಹಕಾರ ನೀಡುತ್ತಿದೆ ಎಂದರು.

ಆಯುರ್ವೇದವು ಕೇವಲ ಚಿಕಿತ್ಸಾ ಪದ್ಧತಿಯಾಗಿರದೆ ಆರೋಗ್ಯಪೂರ್ಣ ಜೀವನಶೈಲಿ ತಿಳಿಸುವ ಪರಿಪೂರ್ಣ ವಿಜ್ಞಾನವಾಗಿದೆ. ಇಂದಿನ ದಾವಂತದ ಬದುಕಿನಿಂದ ಕಂಡುಬರುವ ಅಸಾಂಕ್ರಾಮಿಕ ವ್ಯಾಧಿಗಳಿಗೆ ಆಯುರ್ವೇದದಲ್ಲಿ ಪರಿಪೂರ್ಣ ಚಿಕಿತ್ಸೆಯಿದ್ದು, ಪಥ್ಯ ಮತ್ತು ಜೀವನಶೈಲಿಯ ಪಾಲನೆಯಿಂದ ಮಾತ್ರ ನಮಗೆ ಪರಿಪೂರ್ಣ ಆರೋಗ್ಯ ಸಾಧ್ಯ ಎಂದು ತಿಳಿಸಿದ ಅವರು, ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಬಾಪೂಜಿ ಆಯುರ್ವೇದಿಕ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಸಿ.ಟಿ. ಬಸವರಾಜಪ್ಪ ಮಾತನಾಡಿ, ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗಿದ್ದು, ಸನಾತನ ಆಯುರ್ವೇದ ವಿಜ್ಞಾನದ ಉಪಯೋಗ ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ದೈನಂದಿನ ಆಹಾರ, ವಿಹಾರ ಮತ್ತು ಚಿಂತನೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಕಿವಿಮಾತು ಹೇಳಿದರು.  ಶ್ರೀ ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ವೈ. ರಾಜಾರಾಮ್ ಗುರುಗಳು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ಸರ್ಕಾರಿ ಆರ್ಯುವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಉದಯ ಭಾಸ್ಕರ್, ನರಹರಿ ಸೇವಾ ಟ್ರಸ್ಟ್ ಸದಸ್ಯರಾದ ಮಲ್ಲಿಕಾರ್ಜುನಪ್ಪ, ರೇವಣಸಿದ್ದಪ್ಪ, ಮಾರುತಿ, ಸುಹಾಸ್, ಯತೀಶ್ ಎಂ. ಸಿದ್ದಾಪುರ, ವೆಂಕಟೇಶಮೂರ್ತಿ, ಬಾಪೂಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತೆಯ ಪ್ರಾಧ್ಯಾಪಕರಾದ  ಡಾ. ಲಕ್ಷ್ಮಿ ನಾರಾಯಣ್, ಡಾ.ಅರುಣ್, ಡಾ. ಹೃತಿಕ್, ಮಾನಸ, ಸಂಜನಾ ಸೇರಿದಂತೆ ವಿವಿಧ ತಜ್ಞ ವೈದ್ಯರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026