LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಬಳ್ಳಾಪುರದಲ್ಲಿ ಕ್ರಿಕೆಟ್ ಟೂರ್ನಿಗೆ ಎಂ.ಎಸ್. ರಕ್ಷಾ ರಾಮಯ್ಯ ಚಾಲನೆ

ಚಿಕ್ಕಬಳ್ಳಾಪುರ: ಊಹೆ ಮಾಡಿಕೊಂಡು ಕಟ್ಟುಕಥೆ ಕಟ್ಟುವುದನ್ನು ನಿಲ್ಲಿಸಿದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸ್ಥಳೀಯ ಆಟಗಾರರು, ವಕೀಲರು, ಮಾಧ್ಯಮ ಪ್ರತಿನಿಧಿಗಳು, ರಾಜಕೀಯ ನೇತಾರರಿಗಾಗಿ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಸಂದರ್ಭದಲ್ಲಿ ಮಾಧ್ಯಮ ಸೇರಿದಂತೆ ಯಾವುದೇ ವಲಯದಿಂದಲೂ ತೀವ್ರ ಪ್ರತಿರೋಧ ವ್ಯಕ್ತವಾಗಿಲ್ಲ. ಆದರೆ ವಿಧಾನಸೌಧದಲ್ಲಿ ನಾಸೀರ್ ಸಾಬ್ ಜಿಂದಾಬಾದ್ ಎಂಬು ಕೂಗಿದ್ದನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಿಕೊಂಡು ವಿವಾದ ಸೃಷ್ಟಿಸಲಾಗಿದೆ. ತಮ್ಮದೇ ಆದ ರೀತಿಯಲ್ಲಿ ಕಲ್ಪನೆ ಮಾಡಿಕೊಂಡು ಕಟ್ಟುಕಥೆ ಸೃಷ್ಟಿಸಿ ಪ್ರಕರಣಕ್ಕೆ ವಿವಾದದ ಸ್ಪರೂಪ ನೀಡಲಾಗಿದೆ ಎಂದರು.

ನಮಗೆ ದೇಶ ಮೊದಲು. ಆ ನಂತರ ಉಳಿದದ್ದು. ವಿಧಾನಸೌಧ ಪ್ರಕರಣದ ಬಗ್ಗೆ ಎಫ್.ಎಸ್.ಎಲ್ ನಿಂದ ಧ್ವನಿ ಪರೀಕ್ಷೆ ನಡೆಯುತ್ತಿದ್ದು, ವೈಜ್ಞಾನಿಕ ತನಿಖೆ ಆಗಿ ವರದಿ ಬಂದ ನಂತರ ನಮ್ಮ ಸರ್ಕಾರ ತಪ್ಪಿತಸ್ಥರು ಎಂದು ಕಂಡು ಬಂದಲ್ಲಿ ಯಾವುದೇ ಮುಲಾಜಿಲ್ಲದೇ ಸೂಕ್ತ ಕ್ರಮ ಜರುಗಿಸಲಿದೆ. ಇಂತಹ ಪ್ರಕರಣಗಳಲ್ಲಿ ಕಟ್ಟು ಕಥೆ ಕಟ್ಟುವುದನ್ನು ನಿಲ್ಲಿಸಿದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರಯಲಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ಪಕ್ಷಕ್ಕಾಗಿ ದುಡಿದ ನಿಷ್ಠಾವಂತರಿಗೆ ಸೂಕ್ತ ಸ್ಥಾನ ದೊರೆಯಲಿದ್ದು, ಯಾರಿಗೂ ಅನ್ಯಾವಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಈಗಾಗಲೇ ಈ ಕುರಿತು ಚರ್ಚಿಸಿದ್ದು, ಸ್ಥಳೀಯರಿಗೆ ಅವಕಾಶ ನೀಡಲು ಸಾಕಷ್ಟು ಕಾರ್ಯಕ್ರಮಗಳಿವೆ. ಮೂರ್ನಾಲ್ಕು ದಿನಗಳಲ್ಲಿ ಸೂಕ್ತ ತೀರ್ಮಾನ ಹೊರ ಹೊಮ್ಮಬಹುದು ಎಂದು ಎಂ.ಎಸ್. ರಕ್ಷಾ ರಾಮಯ್ಯ ಆಶಯ ವ್ಯಕ್ತಪಡಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ