LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Muda Case CM Diddaramaiah: ವೈಟ್ನರ್‌ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!

ಮೈಸೂರು: ಸೈಟ್‌ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಹಾರ್ಡ್‌ ಡಿಸ್ಕ್‌ನಲ್ಲಿ ದಾಖಲೆಗಳನ್ನು ಸಂಗ್ರಹಿಸಿ ಕೊಂಡೊಯ್ದಿರುವ ಅಧಿಕಾರಿಗಳು, ವೈಟ್ನರ್‌ ಹಾಕಿ ತಿದ್ದಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪತ್ರದ ಮೂಲ ಪ್ರತಿಯನ್ನೂ ಮುಡಾದಿಂದ ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ನೋಟಿಸ್‌ ನೀಡಿದರೂ ಮುಡಾ ಅಧಿಕಾರಿಗಳು ವೈಟ್ನರ್‌ ಹಾಕಿ ತಿದ್ದಲಾಗಿರುವ ದಾಖಲೆಗಳ ಮೂಲ ಪ್ರತಿಯನ್ನು ಇ.ಡಿ.ಗೆ ನೀಡಲು ಹಿಂದೇಟು ಹಾಕಿದ್ದರು. ಶುಕ್ರವಾರ ಇಡೀ ದಿನದ ವಿಚಾರಣೆ ಬಳಿಕ ಕೊನೆಗೂ ಆ ದಾಖಲೆಗಳನ್ನು ಮುಡಾ ಅಧಿಕಾರಿಗಳು ನೀಡಿದ್ದಾರೆ. ಈ ವೇಳೆ ಆ ಮೂಲ ದಾಖಲೆಯ ಅಸಲಿಯತ್ತು ಪತ್ತೆಗಾಗಿ ಎಫ್ಎಸ್ಎಲ್ ಅಧಿಕಾರಿಯನ್ನೂ ಇ.ಡಿ. ಅಧಿಕಾರಿಗಳು ಕರೆಸಿಕೊಂಡು ಪರಿಶೀಲಿಸಿದ್ದಾರೆ. ಮುಡಾ ಮೇಲೆ ದಾಳಿ ನಡೆಸಿರುವ ಇ.ಡಿ. ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸಂಬಂಧಿಸಿದ ಪ್ರಕರಣವನ್ನೇ ಗುರಿಯಾಗಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವರ್ಷಕ್ಕೆರಡು ಬಾರಿ, ಮೆದೆಹಳ್ಳಿ ರೈಲ್ವೆ ಕೆಳೆಸೇತುವೆದು ಅದೇ ರಾಗ, ಅದೇ ತಾಳ.!-ಜೇಡರ ದಾಸಿಮಯ್ಯ ಅವರ ವಚನ….!30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ನೋಂದಣಿಗೆ ಪ್ಯಾನ್‌ ಮಾಹಿತಿ ಕಡ್ಡಾಯಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೊಂಡ ಗುಜರಾತ್‌ ವ್ಯಕ್ತಿ ಅರೆಸ್ಟ್ರಾಜ್ಯದಲ್ಲಿ ಕೊರೊನಾ ಹೆಚ್ಚಳ: 'ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ'- ದಿನೇಶ್ ಗುಂಡೂರಾವ್ ಸೂಚನೆಪಪ್ಪು ಲೋಹರಾ ಸೇರಿ ಮತ್ತಿಬ್ಬರು ಮೋಸ್ಟ್ ವಾಂಟೆಡ್ ನಕ್ಸಲರನ್ನ ಹತ್ಯೆ ಮಾಡಿದ ಭಧ್ರತಾ ಪಡೆ'ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ'- ಸಿ.ಎಂಕೇರಳ ಕರಾವಳಿಗೆ ವಾಡಿಕೆ ಮೊದಲೇ ಮುಂಗಾರು ಪ್ರವೇಶಜಾರ್ಖಂಡ್‌: ಪ್ರಮುಖ ನಾಯಕ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ ಹಿನ್ನಲೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ