ಬೆಂಗಳೂರು: ಬಿಟ್‌ಕಾಯಿನ್ (Bitcoin) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮೂವರು ಆರೋಪಿಗಳನ್ನು ಬಂಧಿಸಿದೆ.
ಶ್ರೀಕಿ ಅಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು. ಶುಕ್ರವಾರ (ಮೇ 8) ತಡರಾತ್ರಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನೂ ವಶಕ್ಕೆ ಪಡೆದಿದ್ದು, ಇಂದು (ಮೇ 9) ಬೆಳಿಗ್ಗೆ ನ್ಯಾಯಾಧೀಶರ ನಿವಾಸದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಆರೋಪಿಗಳನ್ನು 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.