Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭೂಕುಸಿತಕ್ಕೆ ಮುಂಬೈ–ಪುಣೆ ರೈಲು, ರಸ್ತೆ ಸಂಚಾರ ಅಸ್ತವ್ಯಸ್ತ

ಮುಂಬೈ, ಜುಲೈ 6: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮುಂಬೈ–ಪುಣೆ ನಡುವಿನ ರೈಲು ಹಾಗೂ ರಸ್ತೆ ಸಂಚಾರಕ್ಕೆ ಭಾರೀ ಹೊಡೆತ ಬಿದ್ದಿದೆ. ಭೋರ್ ಘಾಟ್ (ಖಂಡಾಲಾ ಘಾಟ್) ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಮುಖ ರೈಲು ಮಾರ್ಗಗಳ ಸಂಚಾರ ಸ್ಥಗಿತಗೊಂಡಿದ್ದು, ಎಕ್ಸ್‌ಪ್ರೆಸ್‌ವೇ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲೂ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಕರ್ಜತ್–ಲೋಣಾವಳಾ ನಡುವಿನ ಭೋರ್ ಘಾಟ್ ವಿಭಾಗದಲ್ಲಿ ನಿರಂತರ ಮಳೆಯಿಂದ ಹಲವು ಕಡೆ ಭೂಕುಸಿತ ಸಂಭವಿಸಿದೆ. ಠಾಕುರ್ವಾಡಿ–ಮಂಕಿ ಹಿಲ್ ಲೂಪ್ ಕ್ಯಾಬಿನ್ ನಡುವಿನ ಅಪ್ ಲೈನ್ ಹಾಗೂ ಖಂಡಾಲಾ–ಮಂಕಿ ಹಿಲ್ ನಡುವಿನ ಮಧ್ಯದ ರೈಲು ಹಳಿಯಲ್ಲಿ ಭೂಕುಸಿತ ಉಂಟಾಗಿದೆ. ಮಣ್ಣು, ಬಂಡೆಗಳು ಹಾಗೂ ಮರಗಳು ಹಳಿಗಳ ಮೇಲೆ ಬಿದ್ದ ಪರಿಣಾಮ ಮೂರು ಪ್ರಮುಖ ರೈಲು ಹಳಿಗಳಲ್ಲೂ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಇದರ ಪರಿಣಾಮವಾಗಿ ಸಿಎಸ್‌ಎಂಟಿ–ಪುಣೆ ಇಂದ್ರಾಯಣಿ ಎಕ್ಸ್‌ಪ್ರೆಸ್, ಇಂಟರ್‌ಸಿಟಿ ಎಕ್ಸ್‌ಪ್ರೆಸ್, ಡೆಕ್ಕನ್ ಎಕ್ಸ್‌ಪ್ರೆಸ್, ಡೆಕ್ಕನ್ ಕ್ವೀನ್, ಪ್ರಗತಿ ಎಕ್ಸ್‌ಪ್ರೆಸ್, ಧುಳೆ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಸಿಂಹಗಢ ಎಕ್ಸ್‌ಪ್ರೆಸ್ ಸೇರಿದಂತೆ ಇನ್ನೂ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ದೂರ ಪ್ರಯಾಣದ ಕೆಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ.

ಹಳಿಗಳ ಮೇಲೆ ಬಿದ್ದಿರುವ ಮಣ್ಣು, ಬಂಡೆಗಳು ಹಾಗೂ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ರೈಲ್ವೆ ಸಿಬ್ಬಂದಿ ನಡೆಸುತ್ತಿದ್ದು, ನಿರಂತರ ಮಳೆ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಪ್ರಯಾಣಿಕರು ತಮ್ಮ ರೈಲುಗಳ ಇತ್ತೀಚಿನ ಸ್ಥಿತಿಯನ್ನು ಪರಿಶೀಲಿಸಿಕೊಂಡು ಮಾತ್ರ ಪ್ರಯಾಣಿಸಲು ರೈಲ್ವೆ ಇಲಾಖೆ ಮನವಿ ಮಾಡಿದೆ.

ಇನ್ನೊಂದೆಡೆ, ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇಯ ಎರಡೂ ದಿಕ್ಕಿನ ವಾಹನ ಸಂಚಾರವನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಾವಲ್ ಹಾಗೂ ತಾಮ್ಹಿಣಿ ಘಾಟ್ ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕನೆಕ್ಟಿಂಗ್ ಲಿಂಕ್ ಮತ್ತು ಮಿಸ್ಸಿಂಗ್ ಲಿಂಕ್ ನಡುವಿನ ಭಾಗದಲ್ಲಿ ಕಾಂಕ್ರೀಟ್ ಕಂಬ ರಸ್ತೆ ಮೇಲೆ ಕುಸಿದ ಪರಿಣಾಮ ಸಂಚಾರ ಬಂದ್ ಮಾಡಲಾಗಿದೆ. ಹಳೆಯ ಮುಂಬೈ–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲೂ ಹಲವು ಕಡೆ ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.

ಕೇವಲ ಎರಡು ತಿಂಗಳ ಹಿಂದೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದ್ದ 13 ಕಿಲೋಮೀಟರ್ ಉದ್ದದ ಮುಂಬೈ–ಪುಣೆ ಮಿಸ್ಸಿಂಗ್ ಲಿಂಕ್ ಯೋಜನೆಯನ್ನೂ ಭೂಕುಸಿತದ ಹಿನ್ನೆಲೆಯಲ್ಲಿ ಮುಚ್ಚಲಾಗಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಬೆಳಗ್ಗೆಯಿಂದಲೇ ಸಂಚಾರ ಮಾರ್ಗ ಬದಲಾವಣೆ ಜಾರಿಗೆ ತಂದಿದ್ದು, ಹೆದ್ದಾರಿ ಪೊಲೀಸರು ಸ್ಥಳದಲ್ಲೇ ನಿಗಾ ವಹಿಸಿದ್ದಾರೆ.

ಮಿಸ್ಸಿಂಗ್ ಲಿಂಕ್ ಬಂದ್ ಆಗಿದ್ದರಿಂದ ಅನೇಕ ವಾಹನಗಳು ಲೋಣಾವಳಾ ಮೂಲಕ ಹಳೆಯ ಮಾರ್ಗವನ್ನು ಬಳಸುತ್ತಿರುವ ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಕೆಲವು ವಾಹನ ಸವಾರರು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲ್ಲೇ ಸಿಲುಕಿಕೊಂಡಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುಣೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಅಗತ್ಯವಿಲ್ಲದಿದ್ದರೆ ಪ್ರಯಾಣಿಸದಂತೆ ಹಾಗೂ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ