LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನನ್ನ ಮೇಲೆ ಆಸೀಡ್‌ ದಾಳಿ ನಡೆದಿದೆ' - ಡಿಕೆ ಬ್ರದರ್ಸ್‌ ವಿರುದ್ಧ ಮುನಿರತ್ನ ಆರೋಪ

ಬೆಂಗಳೂರು : ಡಿಕೆ ಸುರೇಶ್‌, ಡಿಕೆ ಶಿವಕುಮಾರ್‌ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್‌ ದಾಳಿ ನಡೆದಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಡಿಕೆ ಬ್ರದರ್ಸ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ನನ್ನ ಮೇಲೆ ನಿರಂತರ ದಾಳಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಎಂಬುವುದಾಗಿ ಹೇಳಿಕೆ ನೀಡಿದ್ದಾರೆ.

ಡಿಕೆ ಸುರೇಶ್, ಡಿಕೆ ಶಿವಕುಮಾರ್‌, ಕುಸುಮ ತಂದೆ ಹನುಮಂತರಾಯಪ್ಪ ನನ್ನ ಮೇಲಿನ ದಾಳಿಗೆ ನೇರ ಹೊಣೆ. ಇದು ಕಾಂಗ್ರೆಸ್ ಪ್ರೇರಿತ ಕೃತ್ಯವಾಗಿದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕೆಲವರು ಮನೆಯ ಮುಂದೆಯೇ ಬಂದು ರಾಜೀನಾಮೆ ಕೊಡಿ. ಇಲ್ಲದೇ ಇದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂಬುವುದಾಗಿ ಶಾಸಕ ಮುನಿರತ್ನ ತಿಳಿಸಿದ್ದಾರೆ.

ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದ್ದು, ಕೂಡಲೇ ಪೊಲೀಸರು ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ದಾಳಿಯ ಬಳಿಕ ಶಾಸಕ ಮುನಿರತ್ನ ಡಿಕೆ ಸುರೇಶ್, ಡಿಕೆ ಶಿವಕುಮಾರ್‌ ವಿರುದ್ಧ ಆರೋಪ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವುವಿಮಾನಗಳ ಮಾದರಿಯಲ್ಲಿ ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ತರಲು ರೈಲ್ವೆ ಇಲಾಖೆ ಚಿಂತನೆ!