LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪ

ಬೆಂಗಳೂರು : ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಮುನಿಯಪ್ಪ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಸಿಗುತ್ತಿಲ್ಲ. ಜನರು ಅರ್ಜಿ ಹಾಕಿ ಕಾಯುತ್ತಿದ್ದಾರೆ. ಸರ್ಕಾರ ಸಿದ್ಧ ಉತ್ತರ ಕೊಡುತ್ತಿದೆ. ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಪ್ರೀತಿ ತರಹ ಸರ್ಕಾರ ಮಾಡುತ್ತಿದೆ. ಕೂಡಲೇ ಅರ್ಜಿ ಹಾಕಿರೋರಿಗೆ ರೇಷನ್ ಕಾರ್ಡ್ ಕೊಡಬೇಕು. ಸಮಸ್ಯೆ ಪರಿಹಾರ ಮಾಡಬೇಕು ಎಂದು ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಅವರು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಆಗ್ರಹಿಸಿದ್ದಾರೆ.

ನಂತರ, "ಮೂರು ವರ್ಷಗಳಿಂದ ಬಿಪಿಎಲ್ ಕಾರ್ಡ್ ಪೆಂಡಿಂಗ್ ಜಾಸ್ತಿ ಇವೆ. ಇದರಿಂದ ಬಡವರಿಗೆ ಸಮಸ್ಯೆ ಆಗುತ್ತಿದೆ. ಗೃಹಲಕ್ಷ್ಮಿ, ಆಸ್ಪತ್ರೆ ಅನೇಕ ಕಡೆ ರೇಷನ್ ಕಾರ್ಡ್ ಬೇಕಾಗಿದೆ. ಅನರ್ಹರ ಕಾರ್ಡ್ ರದ್ದು ಮಾಡಿ. ಅವಶ್ಯಕತೆ ಇರೋರಿಗೆ ರೇಷನ್ ಕಾರ್ಡ್ ನೀಡಬೇಕು" ಎಂದು ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮುನಿಯಪ್ಪ ಅವರು, "ಕರ್ನಾಟಕ ರಾಜ್ಯದಲ್ಲಿ 74% ಬಿಪಿಎಲ್ ಕಾರ್ಡ್ ಇವೆ. ಬೇರೆ ಯಾವುದೇ ದಕ್ಷಿಣ ರಾಜ್ಯದಲ್ಲಿ ಇಷ್ಟು ಬಿಪಿಎಲ್ ಕಾರ್ಡ್ ಇಲ್ಲ. ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಜಾಸ್ತಿ ಇವೆ. ಈಗ 1.28 ಕೋಟಿ ಕಾರ್ಡ್‌ಗೆ ಅಕ್ಕಿ ಕೊಡಲಾಗುತ್ತಿದೆ. 3.27 ಲಕ್ಷ ಕಾರ್ಡ್ ಬಿಪಿಎಲ್ ಕಾರ್ಡ್ ಕೊಡೋಕೆ ಬಾಕಿ ಇದೆ. ಎಪಿಎಲ್ ಅರ್ಹತೆ ಇರೋರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅಧಿವೇಶನ ಮುಗಿದ ಬಳಿಕ ಅದನ್ನ ಪರಿಷ್ಕರಣೆ ಪ್ರಾರಂಭಿಸುತ್ತೇವೆ. ಅಧಿವೇಶನ ಮುಗಿದ ಮೇಲೆ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಶುರು. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅರ್ಜಿ ಹಾಕಿರೋ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡುತ್ತೇವೆ" ಎಂದರು.

"ಎಪಿಎಲ್ ಕಾರ್ಡ್ ರಾಜ್ಯದಲ್ಲಿ ೨೫ ಕಾರ್ಡ್ ಇವೆ. ಆದರೆ 1 ಲಕ್ಷ ಜನರು ಮಾತ್ರ ಅಕ್ಕಿ ಪಡೆಯುತ್ತಿದ್ದಾರೆ. ಅದಕ್ಕೆ ಎಪಿಎಲ್ ಕಾರ್ಡ್ ಕೊಡೋದು ನಿಲ್ಲಿಸಿದ್ದೇವೆ. ಅಗತ್ಯ ಇದ್ದರೆ ಎಪಿಎಲ್ ಕಾರ್ಡ್ ಕೊಡುತ್ತೇವೆ" ಎಂದು ಮಾಹಿತಿ ನೀಡಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026