Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕಟ್ಟಿಕೊಂಡ ಹೆಂಡ್ತಿಯನ್ನೇ ಕೊಲೆಗೈದ ಪತಿರಾಯನಿಂದ ಕೊಲೆ : ಕೊನೆಗೂ ಶಿಕ್ಷೆ ಪ್ರಕಟ ಮಕ್ಕಳನ್ನು ಎತ್ತಿಕೊಳ್ಳುವ ಕಾರಣಕ್ಕೆ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆಗೈದ ಭೂಪ

ಬೆಳಗಾವಿ : ನಗರದ ವಿಜಯನಗರ ಆತವಾಡಕರ ಲೇಔಟ್ನ ಬಾಡಿಗೆ ಮನೆಯಲ್ಲಿ ಗಂಡನೊಬ್ಬ ಹೆಂಡತಿಯನ್ನು ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಮೂಲತಃ ವಿಜಯಪುರ ಜಿಲ್ಲೆ ತಾಳಿಕೋಟಿಯ
ಪರಶುರಾಮ ಗಣಪತಿ ಪೀಸೆ(40)ಶಿಕ್ಷೆಗೊಳಗಾದ ಆರೋಪಿ.

2020 ರ ಫೆಬ್ರವರಿ 13 ರಂದು ಮಧ್ಯಾಹ್ನ 1 ರಿಂದ 1.30 ರ ಸುಮಾರಿಗೆ ಈತ ತನ್ನ ಪತ್ನಿ ಕವಿತಾ ಅವರೊಂದಿಗೆ ತನ್ನ ಸಣ್ಣ ಮಕ್ಕಳನ್ನು ಎತ್ತಿಕೊಳ್ಳುವ ವಿಚಾರದಲ್ಲಿ ತಂಟೆ ತೆಗೆದು ಅದೇ ಸಿಟ್ಟಿನಿಂದ ಅವರ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಈ ಬಗ್ಗೆ ಕವಿತಾ ಅವರ ತಂದೆ ಕಲಬುರ್ಗಿಯ ಸುನಿಲ್ ಕುಮಾರ್ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ಕ್ಯಾಂಪ್ ಪೊಲೀಸ್ ಠಾಣೆಯ ಪಿ ಐ ಡಿ.ಸಂತೋಷ ಕುಮಾರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಬೆಳಗಾವಿಯ ಐದನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಅವರು ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರ ಸರ್ಕಾರಿ ಅಭಿಯೋಜಕ ಐ.ಎಂ.ಮಠಪತಿ ವಾದ ಮಂಡಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ