LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಹತ್ಯೆ!

ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ನಿನ್ನೆ (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ ಆಗಿದ್ದು, ರಿಯಲ್ ಎಸ್ಟೇಟ್ ಸಂಬಂದಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದಾಗ ಇಬ್ಬರನ್ನೂ ಅಪಹರಿಸಿ ಕೊಲೆ ಬರ್ಬರವಾಗಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ.

ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ ಪ್ರಶಾಂತರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಕೊಲೆಯಾದ ತಂದೆ ಮಕ್ಕಳು ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು.



ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಇಬ್ಬರೂ ಬೆಂಗಳೂರಿನ ಕಾಡುಗುಡಿ ಮೂಲದ ಉದ್ಯಮಿಗಳು ಆಗಿದ್ದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಆಪ್ತ ಮೂಲಗಳಲ್ಲಿ ಇವರು ಗುರುತಿಸಿಕೊಂಡಿದ್ದರು. ಕಾಡುಗೋಡಿಯ ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಇನ್ನು ಪುತ್ರ ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದರು.

ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಇಬ್ಬರೂ ಮಾರ್ವಲ್ ಬಿಲ್ಡರ್ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಆಂಧ್ರ ಮೂಲದ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಅಪ್ಪ- ಮಗನ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು.

ನಿನ್ನೆ (ಜುಲೈ 22) ವಿಮಾನದ ಮೂಲಕ ಅಪ್ಪ-ಮಗ ಕೋರ್ಟ್ ಕೇಸ್ ಗೆ ತೆರಳಿದ್ದು, ಇಂದು ಬೆಳ್ಳಗ್ಗೆಯಿಂದ ಮದ್ಯಾಹ್ನ 12ಗಂಟೆವರೆಗೂ ಅಪ್ಪ-ಮಗ ಇಬ್ಬರೂ ಕೋರ್ಟ್ ಬಳಿಯೇ ಇದ್ದರು. ಆದರೆ, 12 ಗಂಟೆ ಸುಮಾರಿಗೆ ಕೋರ್ಟ್ ಬಳಿಯೇ ತಂದೆ-ಮಗ ಇಬ್ಬರನ್ನೂ ಮಾತುಕತೆಗೆ ಕರೆದ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ರಾಜಿಯಾಗೋಣವೆಂದು ಮಾತನಾಡುತ್ತಲೇ, ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕೂರಿಸಿಕೊಂಡ ಕಿಡ್ನಾಪ್ ಮಾಡಿದ್ದಾರೆ. ಇದಾದ ಬಳಿಕ 12.20ಕ್ಕೆ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಹೆದ್ದಾರಿಯಲ್ಲೇ ಬೀಸಾಡಿ ಹೋಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026