LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟ್ರಂಪ್‌ ನೀತಿಯನ್ನು ಟೀಕಿಸಿದ ಬಳಿಕ DOGE ಮುಖ್ಯಸ್ಥ ಹುದ್ದೆಯಿಂದ ಇಳಿದ ಮಸ್ಕ್‌

ವಾಷಿಂಗ್ಟನ್‌ :ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಬಳಿಕ ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್‌ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಹುದ್ದೆಯಿಂದ ಕೆಳಗೆ ಇಳಿದಿದಿದ್ದಾರೆ.

ಎಲಾನ್ ಮಸ್ಕ್ ಅವರು ಎಕ್ಸ್‌ನಲ್ಲಿ ನನ್ನ DOGE ಅವಧಿ ಕೊನೆಯಾಗಿದೆ ಎಂದು ಘೋಷಿಸಿದರು. ಸರ್ಕಾರದ ವ್ಯರ್ಥ ಖರ್ಚುಗಳನ್ನು ಕಡಿಮೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ ಮುಂದೆ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನ ಭಾಗವಾಗಿದೆ ಎಂದು ಹೇಳಿದ್ದಾರೆ. ತೆರಿಗೆ ಬಿಲ್‌ಗೆ ಸಂಬಂಧಿಸಿದಂತೆ ಟ್ರಂಪ್‌ ಜೊತೆ ಉಂಟಾಗಿರುವ ಭಿನ್ನಭಿಪ್ರಾಯದಿಂದ DOGE ಹುದ್ದೆಯನ್ನು ಮಸ್ಕ್‌ ತೊರೆದಿದ್ದಾರೆ. ಆದಾಯಕ್ಕಿಂತ ಖರ್ಚು ಹೆಚ್ಚಾದರೆ ಡಿಒಜಿಇ ದಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು ಇಲಾಖೆಯನ್ನು ದುರ್ಬಲಗೊಳಿಸಲಿದೆ ಎಂದು ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಸ್ಕ್‌ ಅವರು ಡೊನಾಲ್ಡ್‌ ಟ್ರಂಪ್‌ ಪರ ಮತಯಾಚನೆ ಮಾಡಿದ್ದರು. ನಂತರ ಟ್ರಂಪ್‌ DOGE ಮುಖ್ಯಸ್ಥರನ್ನಾಗಿ ಮಸ್ಕ್‌ ಅವರನ್ನು ನೇಮಿಸಿದ್ದರು. ನೇಮಿಸಿದ ನಂತರ ಹಲವಾರು ಸರ್ಕಾರಿ ಇಲಾಖೆಗಳನ್ನು ಮುಚ್ಚಿದ್ದರು. ಉದ್ಯೋಗಿಗಳನ್ನು ಮನೆಗೆ ಕಳುಹಿಸಿದರು. ಅಮೆರಿಕದ ಹಲವು ದೇಶಗಳಿಗೆ ನೀಡುತ್ತಿದ್ದ USAID ನಿಲ್ಲಿಸಿದ್ದರು. ಇದರಿಂದಾಗಿ ಸರ್ಕಾರಿ ಇಲಾಖೆಯ ಕೆಂಗಣ್ಣಿಗೆ ಮಸ್ಕ್‌ ಗುರಿಯಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026