Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಶಿಗ್ಗಾವಿ ಸವಣೂರಿನಲ್ಲಿ ಸಿಎಂ ಬೊಮ್ಮಾಯಿಗೆ ಮುಸ್ಲೀಂ ಸಮುದಾಯ ಬೆಂಬಲ

ಸುದ್ದಿಮೂಲ ವಾರ್ತೆ

ಹಾವೇರಿ,ಮೇ.4: ಅರ್ಧ ರೊಟ್ಟಿ ಕಡಿಮೆ ತಿಂದರೂ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಮುಸ್ಲೀಮ್ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಿವಿ ಮಾತು

ಹಾವೇರಿ(ಶಿಗ್ಗಾಂವಿ): ಅರ್ಧ ರೊಟ್ಟಿ ಕಡಿಮೆ ತಿಂದರೂ ಮಕ್ಕಳಿಗೆ ಶಿಕ್ಷಣ ಕೊಡುವುದನ್ನು ನಿಲ್ಲಿಸಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಸ್ಲೀಂ ಸಮುದಾಯದ ಮುಖಂಡರಿಗೆ ಕಿವಿ ಮಾತು ಹೇಳಿದರು.

ಇಂದು ಶಿಗ್ಗಾವಿಯಲ್ಲಿ‌ ಮುಸ್ಲಿಂ ಸಮುದಾಯದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.





ಯಾವ ಮಕ್ಕಳ ಕೈಯಲ್ಲಿ ಪೆನ್ನು ಇರಬೇಕಿತ್ತೋ, ಅವರ ಕೈಯಲ್ಲಿ ಪಾನಾ ಪಕ್ಕಡ್ ಇರುತ್ತಿತ್ತು. ನಿಮ್ಮ ಕಷ್ಟ ಅರ್ಥ ಆಗುತ್ತದೆ. ಆದರೆ, ಅರ್ಧ ರೊಟ್ಟಿ ಕಡಿಮೆ ತಿಂದರೂ ಮಕ್ಕಳಿಗೆ ಶಿಕ್ಷಣ ನೀಡುವುದನ್ನು ನಿಲ್ಲಿಸಬೇಡಿ ವಿದ್ಯಾನಿಧಿ ಯೋಜನೆ ಎಲ್ಲ ವರ್ಗದ ಸಮುದಾಯದ ಮಕ್ಕಳಿಗೆ ದೊರೆತಿದೆ. ಅಲ್ಪ ಸಂಖ್ಯಾತ ಸಮುದಾಯದವರು ಅನುಕೂಲ ಪಡೆದಿದ್ದಾರೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಶಿಗ್ಗಾವಿ ಸವಣೂರು ಸಂತ ಶಿಶುನಾಳ ಶರೀಫರ ನಾಡು. ನಮ್ಮ ನಡುವೆ ಸಂಬಂಧಗಳಿವೆ. ನಾನು ಯಾವಾಗಲೂ ಎರಡು ಮಾತು ಹೇಳುತ್ತೇನೆ‌. ಒಂದು ತಿಂಗಳು ಚುನಾವಣೆ, ಐವತ್ತೊಂಬತ್ತು ತಿಂಗಳು ಅಭಿವೃದ್ಧಿ ಅಂತ. ನಾನು ಅದನ್ನು ಪಾಲಿಸುತ್ತ ಬಂದಿದ್ದೇನೆ. ಈ ಚುನಾವಣೆಯಲ್ಲಿ ಸಾಕಷ್ಟು ಬದಲಾವಣೆಯ ಗಾಳಿ ಬೀಸುತ್ತಿದೆ. ಎಲ್ಲ ಸಮುದಾಯಗಳು ಜಾಗೃತರಾಗಿದ್ದಾರೆ. ಜನರು ಯಾರು ಅಭಿವೃದ್ಧಿ ಮಾಡುತ್ತಾರೋ ಅವರಿಗೆ ಮತ ಹಾಕುವ ಆಲೋಚನೆ ಮಾಡುತ್ತಾರೆ ಎಂದರು.

ನಾವು ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಫಲವನ್ನು ಎಲ್ಲ ಸಮುದಾಯದವರು ಪಡೆಯುತ್ತಾರೆ. ಶಿಗ್ಗಾವಿ ಸವಣೂರಿನಲ್ಲಿ 32 ಸಾವಿರ ರೈತರಿಗೆ ಇದರ ಲಾಭ ದೊರೆತಿದೆ ಎಂದರು.

ನಾನು ಎಲ್ಲ ಸಮುದಾಯ ಮಠಗಳು, ಮಸೀದಿಗಳ ಅಭಿವೃದ್ಧಿಗೆ ಅನುದಾನ ನಿಡಿದ್ದೇನೆ. ನೀವೆಲ್ಲರೂ ಸೇರಿ ಈ ಬಾರಿ ನನಗೆ ಬೆಂಬಲ ಸೂಚಿಸಲು ಬಂದಿದ್ದೀರಿ. ನಿಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.‌ ನಿಮ್ಮ ಬೆಂಬಲ ಸಹಕಾರ ಇರಲಿ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ