LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ

ನವದೆಹಲಿ: ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ. ಇದು ಸಾಮಾಜಿಕ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ವೇಳೆ ಸೋಮವಾರ ಮಾತನಾಡಿದ ಅವರು, ‘ಮಸೂದೆಯನ್ನು ಇಡೀ ಮುಸ್ಲಿಂ ಸಮುದಾಯ ತಿರಸ್ಕರಿಸಿದೆ. ಈ ಮಸೂದೆಯ ಅನುಷ್ಠಾನದಿಂದ ದೇಶವನ್ನು 1980 ಮತ್ತು 1990 ರ ದಶಕದ ಆರಂಭಕ್ಕೆ ಕೊಂಡೊಯ್ಯುತ್ತದೆ’ ಎಂದಿದ್ದಾರೆ.

‘ಈಗ ಈ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದರೆ ಆರ್ಟಿಕಲ್ 25,26, ಮತ್ತು 14ರ ಉಲ್ಲಂಘನೆಯಾಗುತ್ತದೆ. ಅದು ದೇಶದಲ್ಲಿ ಅಸ್ಥಿರತೆಗೆ ಕಾರಣವಾಗುತ್ತದೆ. ಇಡೀ ಮುಸ್ಲಿಂ ಸಮುದಾಯ ಯಾವುದೇ ವಕ್ಸ್ ಆಸ್ತಿಯನ್ನು ಬಿಟ್ಟುಕೊಡುವುದಿಲ್ಲ’ ಎಂದು ತಿಳಿಸಿದ್ದಾರೆ.

‘ನೀವು ವಿಕಸಿತ ಭಾರತ ಮಾಡಲು ಬಯಸುತ್ತೀರಿ. ಮಸೂದೆ ಮೂಲಕ ದೇಶವನ್ನು 80, 90ರ ದಶಕಕ್ಕೆ ಕೊಂಡೊಯ್ಯುತ್ತಿದ್ದೀರಿ, ಅದು ನಿಮ್ಮ ಜವಾಬ್ದಾರಿ. ಆದರೆ ಹೆಮ್ಮೆಯ ಭಾರತೀಯ ಮುಸಲ್ಮಾನನಾಗಿ ನನ್ನ ಮಸೀದಿಯ ಒಂದು ಇಂಚನ್ನು ಕಳೆದುಕೊಳ್ಳುವುದಿಲ್ಲ. ನನ್ನ ದರ್ಗಾದ ಒಂದು ಇಂಚು ಜಾಗವನ್ನೂ ಬಿಟ್ಟುಕೊಡುವುದಿಲ್ಲ. ನಾವು ಇನ್ನು ಮುಂದೆ ಇಲ್ಲಿ ರಾಜತಾಂತ್ರಿಕ ಮಾತುಕತೆ ನಡೆಸುವುದಿಲ್ಲ. ಇದು ನಾನು ಪ್ರಾಮಾಣಿಕವಾಗಿ ನಿಂತು ಮಾತನಾಡಬೇಕಾದ ಸದನವಾಗಿದೆ, ನನ್ನ ಸಮುದಾಯವು ಹೆಮ್ಮೆಯ ಭಾರತೀಯರು. ಇದು ನನ್ನ ಆಸ್ತಿ, ಯಾರೂ ಕೊಟ್ಟಿದ್ದಲ್ಲ. ನೀವು ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ನುಡಿದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್