LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ಷೇತ್ರ ಅಭಿವೃದ್ದಿಪಡಿಸುವುದೇ ನನ್ನ ಮೊದಲ ಆಧ್ಯತೆ: ಶಾಸಕ ಡಾ.ಎಂ.ಚಂದ್ರಪ್ಪ.!

 

ಹೊಳಲ್ಕೆರೆ : ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿಲ್ಲವೆಂದು ನಾನು ಕೈಚೆಲ್ಲಿ ಕೂತಿಲ್ಲ. ಸರ್ಕಾರ ಯಾವುದಾದರೂ ಇರಲಿ ಸಾವಿರಾರು ಕೋಟಿ ರೂ. ಅನುದಾನ ತಂದು ಕ್ಷೇತ್ರ ಅಭಿವೃದ್ದಿಪಡಿಸುವ ತಾಕತ್ತು ಇಟ್ಟುಕೊಂಡಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ತಾಲ್ಲೂಕಿನ ಆರ್.ನುಲೇನೂರು ಗ್ರಾಮದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ನೂತನ ಉಪ ಆರೋಗ್ಯ ಕೇಂದ್ರ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.

ರೈತರಿಗೆ ನೀರು, ವಿದ್ಯುತ್ ಬೇಕು ಎನ್ನುವುದನ್ನು ಮನಗಂಡು ಕೋಟೆಹಾಳ್ ಸಮೀಪ 500 ಕೋಟಿ ರೂ.ವೆಚ್ಚದಲ್ಲಿ 440 ಮೆ.ವ್ಯಾ. ಪವರ್ ಸ್ಟೇಷನ್ ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇಷ್ಟು ದೊಡ್ಡ ಪವರ್ ಸ್ಟೇಷನ್ ಎಲ್ಲಿಯೂ ಇಲ್ಲ. ಕೆರೆ, ಕಟ್ಟೆ, ಚೆಕ್ಡ್ಯಾಂಗಳನ್ನು ಕಟ್ಟಿಸಿದ್ದರಿಂದ ನೀರು ತುಂಬಿ ತುಳುಕುತ್ತಿದೆ. ತಾಲ್ಲೂಕಿನಾದ್ಯಂತ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸಸಾಗರದಲ್ಲಿ ನಲವತ್ತು ಅಡಿ ಆಳದಲ್ಲಿ ಪಿಲ್ಲರ್ ಹಾಕಿ ಮೋಟಾರ್ ಕೂರಿಸಿದ್ದೇನೆ. ಮಾರ್ಚ್ ವೇಳೆಗೆ ನೀರು ಹರಿಯಲಿದೆ. ಇದರಿಂದ ಇನ್ನು ಮೂವತ್ತು ವರ್ಷಗಳ ಕಾಲ ನೀರಿನ ಸಮಸ್ಯೆಯಿರುವುದಿಲ್ಲ ಎಂದರು.

493 ಹಳ್ಳಿಗಳಲ್ಲಿ ಯಾರಿಂದ ಏನನ್ನು ಹೇಳಿಸಿಕೊಳ್ಳದೆ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ. ಅಧಿಕಾರ ಶಾಶ್ವತವಲ್ಲ. ಇರುವಷ್ಟು ದಿನ ಹತ್ತಾರು ಜನ ಮೆಚ್ಚುವ ರೀತಿಯಲ್ಲಿ ಮೂವತ್ತು ವರ್ಷಗಳಿಂದಲೂ ರಾಜಕಾರಣ ಮಾಡುತ್ತಿರುವುದರಿಂದ ಐದನೆ ಬಾರಿ ಶಾಸಕನಾಗಿದ್ದೇನೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಕೆಲಸ ಮಾಡುವ ರಾಜಕಾರಣಿ ನಾನು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣ, ಸದಸ್ಯರುಗಳಾದ ಸತೀಶ್, ಮಮತಾರಾಜು, ರಂಗಮ್ಮ, ಮುರುಗೇಂದ್ರಪ್ಪ, ಗೌಡ್ರು ಜಯಣ್ಣ, ಬಸವಂತಪ್ಪ, ನುಲೇನೂರು ಎಂ.ಹೆಚ್.ಶೇಖರ್, ಶಶಿಧರ್, ಸಂದೀಪ್, ವೈದ್ಯಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿ