Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಮೈಸೂರು ದಸರಾ ಪುಸ್ತಕ ರಿಯಾಯಿತಿ ಮಾರಾಟ ಮೇಳ: ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಸೆ.23: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ’ದಲ್ಲಿ ಮಳಿಗೆಗಳನ್ನು ತೆರೆಯಲು ಇಚ್ಛಿಸುವ ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಈ ಪುಸ್ತಕ ಮೇಳ ನಡೆಯಲಿದೆ.
ಭಾಗವಹಿಸಲು ಆಸಕ್ತಿಯಿರುವ ಪ್ರಕಾಶಕರು ಅಥವಾ ಮಾರಾಟಗಾರರು ಪ್ರತಿ ಮಳಿಗೆಗೆ ರೂ. 1,000 ಭದ್ರತಾ ಠೇವಣಿ ಮೊತ್ತವನ್ನು ಡಿ.ಡಿ. (ಡಿಮಾಂಡ್ ಡ್ರಾಫ್ಟ್) ಮೂಲಕ ಪಾವತಿಸಬೇಕಾಗುತ್ತದೆ. ಡಿ.ಡಿ.ಯನ್ನು ‘ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು’ ಇವರ ಹೆಸರಿನಲ್ಲಿ ತೆಗೆದಿರಬೇಕು.
ನಿಗದಿತ ಅರ್ಜಿ ನಮೂನೆಯನ್ನು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಪ್ರಾಧಿಕಾರದ ಕಚೇರಿ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ (https://kpp.karnataka.gov.in) ಮೂಲಕ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್ 5, 2026ರ ಸಂಜೆ 5 ಗಂಟೆಯೊಳಗೆ ಬೆಂಗಳೂರಿನ ಕನ್ನಡ ಭವನದಲ್ಲಿರುವ ಆಡಳಿತಾಧಿಕಾರಿಗಳ ಕಚೇರಿಗೆ ನೋಂದಾಯಿತ ಅಂಚೆ ಅಥವಾ ಖುದ್ದಾಗಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22484516 ಅನ್ನು ಸಂಪರ್ಕಿಸಬಹುದು. ಮಳಿಗೆಗಳನ್ನು ‘ಮೊದಲು ಬಂದವರಿಗೆ ಮೊದಲ ಆದ್ಯತೆ’ ಮೇರೆಗೆ ಹಂಚಿಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ