ಮೈಸೂರು: ಅತಿಥಿ ಉಪನ್ಯಾಸಕರ ನೇಮಕ: ಅರ್ಜಿ ಆಹ್ವಾನ
ಮೈಸೂರು: ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು, ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಜೂನ್ 26ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು. ತರಗತಿಗಳು ಅನ್ವಯವಾಗುವಂತೆ ಕಾರ್ಯನಿರ್ವಹಿಸಲು ತಿಳಿಸಲಾಗುವುದು.
ಬೋಧನಾ ವಿಷಯ, ನಿಗಧಿಪಡಿಸಿದ ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ಗೌರವ ಸಂಭಾವನೆ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು www.mysore.nic.in ಮತ್ತು www.cavamysore.karnataka.gov.in ಅಂತರ್ಜಾಲದ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ. ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.