Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

GOOD NEWS: ಮೈಸೂರು ದಸರಾ ಹಬ್ಬದ ಪ್ರಯುಕ್ತ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ವಿವಿಧ ನಿಲ್ದಾಣಗಳ ನಡುವೆ ಕೆಳಗಿನ ಹೆಚ್ಚುವರಿ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ:

1. ಕೆಎಸ್ಆರ್ ಬೆಂಗಳೂರು–ಅಶೋಕಪುರಂ ನಡುವೆ 3 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06285/06286):

ರೈಲು ಸಂಖ್ಯೆ 06285 ಕೆಎಸ್ಆರ್ ಬೆಂಗಳೂರು–ಅಶೋಕಪುರಂ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 12:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 15:40 ಗಂಟೆಗೆ ಅಶೋಕಪುರಂ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06286 ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 16:10 ಗಂಟೆಗೆ ಅಶೋಕಪುರಂನಿಂದ ಹೊರಟು, ಅದೇ ದಿನ 20:00 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಎಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಹಾಗೂ ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲ್ಲಲಿವೆ.

2.  ಕೆಎಸ್ಆರ್ ಬೆಂಗಳೂರು–ಮೈಸೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06287/06288):

ರೈಲು ಸಂಖ್ಯೆ 06287 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 21:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ 00:20 ಗಂಟೆಗೆ ಮೈಸೂರು ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06288 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 00:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 03:30 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಪಾಂಡವಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ. ರೈಲು ಸಂಖ್ಯೆ 06285/06286 ಮತ್ತು 06287/06288 ಎಂಟು ಮೆಮು ಕಾರ್ ಬೋಗಿಗಳನ್ನು ಹೊಂದಿರಲಿವೆ.

3. ಮೈಸೂರು–ಕೆಎಸ್ಆರ್ ಬೆಂಗಳೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06297/06298):

ರೈಲು ಸಂಖ್ಯೆ 06297 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 23:15 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 02:50 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06298 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 03:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 06:30 ಗಂಟೆಗೆ ಮೈಸೂರು ತಲುಪಲಿದೆ.

ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ, ಬ್ಯಾಡರಹಳ್ಳಿ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ನಿಲ್ಲಲಿವೆ.

4. ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06293/06294):

ರೈಲು ಸಂಖ್ಯೆ 06293 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 21:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 23:20 ಗಂಟೆಗೆ ಚಾಮರಾಜನಗರ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06294 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 23:50 ಗಂಟೆಗೆ ಚಾಮರಾಜನಗರದಿಂದ ಹೊರಟು, ಮರುದಿನ 01:50 ಗಂಟೆಗೆ ಮೈಸೂರು ತಲುಪಲಿದೆ.

ಇಪ್ಪತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

5. ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06289/06290):

ರೈಲು ಸಂಖ್ಯೆ 06289 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 00:10 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 02:00 ಗಂಟೆಗೆ ಚಾಮರಾಜನಗರ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06290 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 02:30 ಗಂಟೆಗೆ ಚಾಮರಾಜನಗರದಿಂದ ಹೊರಟು, ಅದೇ ದಿನ 04:15 ಗಂಟೆಗೆ ಮೈಸೂರು ತಲುಪಲಿದೆ.

ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!